ಕಾರ್ಕಳ : ಮುಡಾರು ಗ್ರಾಮದ ಹುಕ್ರಟ್ಟೆಯ ದೇವಸ ಮನೆ ಬಳಿ ಹಾಡಿ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ಅಕ್ಷಯ್ ಕುಮಾರ್, ಯಶೋಧರ, ರತ್ನಾಕರ ಹಾಗೂ ಇತರರು ಅಂದರ್-ಬಾಹರ್ ಎಂಬ ಜುಗಾರಿ ಆಟವನ್ನು ಆಡುತ್ತಿದ್ದಲ್ಲಿಗೆ ದಾಳಿ ನಡೆಸಿದ ಪೊಲೀಸರು ಅಕ್ಷಯ್ ಕುಮಾರ್‌ನನ್ನು ವಶಕ್ಕೆ ಪಡೆದುಕೊಂಡಿದ್ದು ಉಳಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಆರೋಪಿಗಳು ಇಸ್ಪೀಟು ಆಟಕ್ಕೆ ಬಳಸಿದ ನಗದು ಹಣ 600/-, ಇಸ್ಪೀಟ್ ಎಲೆಗಳು, ನೆಲಕ್ಕೆ ಹಾಸಿದ ಹಳೆಯ ಪ್ಲಾಸ್ಟಿಕ್ ಟರ್ಪಾಲ್ ಮತ್ತು ಅಕ್ಷಯ್ ಕುಮಾರ್ ಇತನು ಸ್ಥಳಕ್ಕೆ ಚಲಾಯಿಸಿಕೊಂಡು ಬಂದಿದ್ದ KA-19-MJ-1275 ನೇ ನೋಂದಣೆ ಸಂಖ್ಯೆಯ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.