ಅಂದರ್-ಬಾಹರ್ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ : ಓರ್ವ ಅರೆಸ್ಟ್

ಕಾರ್ಕಳ : ಮುಡಾರು ಗ್ರಾಮದ ಹುಕ್ರಟ್ಟೆಯ ದೇವಸ ಮನೆ ಬಳಿ ಹಾಡಿ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

ಅಕ್ಷಯ್ ಕುಮಾರ್, ಯಶೋಧರ, ರತ್ನಾಕರ ಹಾಗೂ ಇತರರು ಅಂದರ್-ಬಾಹರ್ ಎಂಬ ಜುಗಾರಿ ಆಟವನ್ನು ಆಡುತ್ತಿದ್ದಲ್ಲಿಗೆ ದಾಳಿ ನಡೆಸಿದ ಪೊಲೀಸರು ಅಕ್ಷಯ್ ಕುಮಾರ್‌ನನ್ನು ವಶಕ್ಕೆ ಪಡೆದುಕೊಂಡಿದ್ದು ಉಳಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಆರೋಪಿಗಳು ಇಸ್ಪೀಟು ಆಟಕ್ಕೆ ಬಳಸಿದ ನಗದು ಹಣ 600/-, ಇಸ್ಪೀಟ್ ಎಲೆಗಳು, ನೆಲಕ್ಕೆ ಹಾಸಿದ ಹಳೆಯ ಪ್ಲಾಸ್ಟಿಕ್ ಟರ್ಪಾಲ್ ಮತ್ತು ಅಕ್ಷಯ್ ಕುಮಾರ್ ಇತನು ಸ್ಥಳಕ್ಕೆ ಚಲಾಯಿಸಿಕೊಂಡು ಬಂದಿದ್ದ KA-19-MJ-1275 ನೇ ನೋಂದಣೆ ಸಂಖ್ಯೆಯ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

‘ಸಿಎಂ ಸಿದ್ರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ’ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿದ ಸಂಪತ್ ಅರೆಸ್ಟ್

ಉಡುಪಿ ಕಡಲತೀರದಲ್ಲಿ ಪೆಹಲ್ಗಾಮ್ ಹಿಂದೂ ನರಮೇಧದ ಮೃತರ ಆತ್ಮಕ್ಕೆ ಶಾಂತಿ ಕೋರಿ ಅಪರಕ್ರಿಯೆ

ತಂದೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಪೆರೋಲ್‌ನಲ್ಲಿ ಉಡುಪಿಗೆ ಆಗಮಿಸಿದ ಭೂಗತ ಪಾತಕಿ ಬನ್ನಂಜೆ ರಾಜ