ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಮೂವರು ವಶಕ್ಕೆ

ಮಲ್ಪೆ : ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಪಡುತೋನ್ಸೆ ಗ್ರಾಮದ ಕೆಮ್ಮಣ್ಣು ಕೋಡಿ ಕಂಡಾಳ ಬಬ್ಬುಸ್ವಾಮಿ ದೈವಸ್ಥಾನದ ಬಳಿಯ ಹಾಡಿಯಲ್ಲಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಲ್ಪೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಉಲ್ಲಾಸ್‌, ಸೀಫನ್‌ ಪೀಟರ್‌ ಡಿ’ಸೋಜಾ, ಶ್ರವಣ ಕುಮಾರ್‌ ಅವರನ್ನು ವಶಕ್ಕೆ ಪಡೆದಿದ್ದು, ಇತರರು ಅಲ್ಲಿಂದ ಓಡಿ ಹೋಗಿದ್ದಾರೆ.

ಕೋಳಿ ಅಂಕ ನಡೆದ ಸ್ಥಳದಲ್ಲಿ ಒಂದು ಕೋಳಿ, ಜೂಜಾಟಕ್ಕೆ ಬಳಿಸಿದ್ದ 960 ರೂ. ನಗದನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ