ಇಸ್ಪೀಟ್‌ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ : ಇಬ್ಬರು ಅರೆಸ್ಟ್, ಮೂವರು ಎಸ್ಕೇಪ್

ಕುಂದಾಪುರ : ಕುಂದಾಪುರ ತಾಲೂಕು ಕಟ್ ಬೆಲ್ತೂರು ಹರಗೋಡು ಕ್ರಾಸ್‌ನಲ್ಲಿರುವ ಮಲಯಾಳಿ ಬೊಬ್ಬರ್ಯ ಹಾಗೂ ಕೆಂಪಣ್ಣಹೈಗುಳಿ ಸಹಪರಿವಾರ ದೈವಸ್ಥಾನದ ಪಕ್ಕದಲ್ಲಿರುವ ಹಾಡಿ ಜಾಗದಲ್ಲಿ ಇಸ್ಪೀಟ್ ಜುಗಾರಿ ಆಡುತ್ತಿದ್ದ ಇಬ್ಬರನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಮೂವರು ಪರಾರಿಯಗಿದ್ದಾರೆ.

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಭೀಮಾಶಂಕರ ಸಿನ್ನೂರ ಸಂಗಣ್ಣ ಹಾಗೂ ಸಿಬ್ಬಂದಿ ದಾಳಿ ನಡೆಸಿ ಇಸ್ಪೀಟ್ ಜುಗಾರಿ ಆಡುತ್ತಿದ್ದ ವಕ್ವಾಡಿ ಗ್ರಾಮದ ಸದಾನಂದ (44) ಮತ್ತು ಕಟ್‌ ಬೇಲ್ಲೂರು ಗ್ರಾಮದ ಗಂಗಾಧರ (49) ಎಂಬುವರನ್ನು ವಶಕ್ಕೆ ಪಡೆದಿದ್ದಾರೆ. ಕಟ್ ಬೇಲ್ಲೂರು ಗ್ರಾಮದ ಸಂಜೀವ ಮತ್ತು ರಜತ್ ಹಾಗೂ ಬಗ್ವಾಡಿ ಗ್ರಾಮದ ಸೋನು ಪರಾರಿಯಾಗಿದ್ದಾರೆ.

ಬಂಧಿತರಿಂದ ಇಸ್ಪೀಟ್ ಜುಗಾರಿ ಆಟಕ್ಕೆ ಬಳಸಿದ್ದ 17,200 ರೂಪಾಯಿ ನಗದು ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮರದ ದಿಮ್ಮಿಗೆ ಮೀನುಗಾರಿಕಾ ಬೋಟ್ ಡಿಕ್ಕಿ : ಅಪಾರ ಹಾನಿ

ಮೆಸ್ಕಾಂ ಎಟಿಪಿ ಬಿಲ್ ಪಾವತಿ ಸೇವೆ ಪುನರಾರಂಭಿಸಿ : ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ

ಸಿಬಿಐ ಅಧಿಕಾರಿ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ