ಪೊಲೀಸರು ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ – ಗೃಹಸಚಿವ ಜಿ. ಪರಮೇಶ್ವರ್

ಮಂಗಳೂರು : ಕಾನೂನಿನ ಮುಂದೆ ಚಂದ್ರಶೇಖರ ಸ್ವಾಮೀಜಿ ದೊಡ್ಡವರಲ್ಲ. ದೇಶದಲ್ಲಿ ಎಲ್ಲರಿಗೂ ಕಾನೂನು ಒಂದೇ. ಕಾನೂನಿನ ಮುಂದೆ ನಾನೂ ಸೇರಿದಂತೆ ಸ್ವಾಮೀಜಿಯೂ ಎಲ್ಲರೂ ಒಂದೇ. ಚಂದ್ರಶೇಖರ ಸ್ವಾಮೀಜಿಯ ಹೇಳಿಕೆಗೆ ಕಾನೂನು ಚೌಕಟ್ಟಿನಲ್ಲಿ ಏನು ಕೆಲಸ ಮಾಡಬೇಕೋ ಅದನ್ನು ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಮಂಗಳೂರಿನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಚಂದ್ರಶೇಖರ ಸ್ವಾಮೀಜಿಯ ಮುಸ್ಲಿಂ ವೋಟ್ ಬ್ಯಾನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ನಕ್ಸಲ್ ವಿರುದ್ಧದ ಕಾರ್ಯಾಚರಣೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿ, ನಕ್ಸಲರಿಗೆ ಶರಣಾಗಲು ಸೂಚಿಸಿದ್ದೇವೆ. ಅವರ ಜೊತೆಯಲ್ಲಿ ಇರುವವರಿಗೆ ಶರಣಾಗಲು ಕೇಳುತ್ತಿದ್ದೇವೆ. ನಕ್ಸಲರು ಶರಣಾದರೆ ಪ್ಯಾಕೇಜ್ ನೀಡುತ್ತೇವೆ. ಸಾಮಾನ್ಯ ಜೀವನಕ್ಕೆ ಅನುಕೂಲ ಮಾಡುತ್ತೇವೆ ಎಂದು ಹೇಳಿದರು.

ಹಾಸನ ಸ್ವಾಭಿಮಾನ ಸಮಾವೇಶಕ್ಕೆ ಅಸಮಾಧಾನ ಅನಾಮಧೇಯ ಪತ್ರ ವಿಚಾರವಾಗಿ ಮಾತನಾಡಿ, ಅನಾಮಧೇಯ ಪತ್ರವನ್ನು ಬಿಜೆಪಿಯವರೇ ಯಾಕೆ ಬರೆದಿರಬಾರದು. ನಮ್ಮಲ್ಲಿ ಯಾವುದೇ ಅಪಸ್ವರವಿಲ್ಲ. ನಾನು ತುಮಕೂರಿನಲ್ಲಿ ಮಾಡಲು ಹೊರಟಿದ್ದೆ. ಆದರೆ ನಮಗೆ ಬೇರೆ ಕಾರ್ಯಕ್ರಮ ಕೊಟ್ಟಿದ್ದಾರೆ. ಪಕ್ಷದಿಂದಲೇ ಸ್ವಾಭಿಮಾನ ಸಮಾವೇಶ ಮಾಡುತ್ತಿದ್ದೇವೆ ಎಂದು ಹೇಳಿದರು.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ