ನಕ್ಸಲ್ ವಿಕ್ರಂ ಗೌಡ ಮರಣೋತ್ತರ ಪರೀಕ್ಷೆ ಪೂರ್ಣ – ಇಂದು ಕುಟುಂಬಕ್ಕೆ ಮೃತದೇಹ ಹಸ್ತಾಂತರ

ಮಣಿಪಾಲ : ಹೆಬ್ರಿಯ ಕಾಡಿನಲ್ಲಿ ನಕ್ಸಲ್ ನಿಗ್ರಹ ಪಡೆ ಪೊಲೀಸರ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ನಕ್ಸಲ್‌ ನಾಯಕ ವಿಕ್ರಂ ಗೌಡನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳವಾರ ಮಣಿಪಾಲದ ಕೆಎಂಸಿ ಶವ ಪರೀಕ್ಷಾಗಾರಕ್ಕೆ ತರಲಾಗಿದೆ. ಆದರೆ ತಡರಾತ್ರಿಯವರೆಗೂ ಮರಣೋತ್ತರ ಪರೀಕ್ಷೆ ನಡೆಯಲಿಲ್ಲ.

ಮಂಗಳವಾರ ಸಂಜೆ ಸುಮಾರು 5 ಗಂಟೆಯ ವೇಳೆ ಪೊಲೀಸ್‌ ಭದ್ರತೆಯಲ್ಲಿ ಆ್ಯಂಬುಲೆನ್ಸ್‌ನಲ್ಲಿ ಮೃತ ದೇಹವನ್ನು ತರಲಾಯಿತು. ಆದರೆ ಮೃತರ ಮನೆ ಮಂದಿ ಬಾರದ ಕಾರಣ ಪಂಚನಾಮೆ ನಡೆಸಲು ಸಾಧ್ಯವಾಗಿಲ್ಲ. ತಡರಾತ್ರಿಯವರೆಗೂ ಮೃತದೇಹವನ್ನು ಪೊಲೀಸರ ಭದ್ರತೆಯಲ್ಲಿ ಪರೀಕ್ಷಾ ಕೇಂದ್ರದೊಳಗೆ ಇರಿಸಲಾಗಿತ್ತು. ಬುಧವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಕ್ಕೆ ಮೃತದೇಹ ಹಸ್ತಾಂತರ ಮಾಡಲಾಗುತ್ತದೆ. ಕುಟುಂಬಸ್ಥರು ವಿಕ್ರಂ ಗೌಡನ ಹುಟ್ಟೂರು ಕೂಡ್ಲುವಿನ ಮನೆ ಜಮೀನಿನಲ್ಲಿ ಅಂತ್ಯಸಂಸ್ಕಾರ ಮಾಡುವ ಸಾಧ್ಯತೆ ಇದೆ.

ಇನ್ನೊಂದೆಡೆ ಎನ್‌ಕೌಂಟರ್‌ ನಡೆದ ಸ್ಥಳಕ್ಕೆ ಬುಧವಾರ ಆಂತರಿಕ ಭದ್ರತ ವಿಭಾಗದ ಡಿಜಿಪಿ ಪ್ರಣವ್‌ ಮೊಹಂತಿ ಭೇಟಿ ನೀಡಲಿದ್ದಾರೆ. ಘಟನೆ ನಡೆದ ಪರಿಸರ ಹಾಗೂ ಹೆಬ್ರಿ ಭಾಗದಲ್ಲಿ ಹೆಚ್ಚುವರಿ ಪೊಲೀಸರು ಹಾಗೂ ಎಎನ್‌ಎಫ್ ಸಿಬಂದಿಯನ್ನು ನಿಯೋಜಿಸಲಾಗಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ