ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಮಾಹಿತಿ ಕಾರ್ಯಗಾರ ಮತ್ತು ಸವಲತ್ತು ವಿತರಣೆ

ಉಡುಪಿ : ಉಡುಪಿ ಜಿಲ್ಲಾಡಳಿತ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿಂದು “ಪ್ರಧಾನ ಮಂತ್ರಿ ಸೂರ್ಯ ಘರ್” ಯೋಜನೆಯ ಮಾಹಿತಿ ಕಾರ್ಯಗಾರ ಮತ್ತು ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಸದರು ಅರ್ಹರಿಗೆ ಸವಲತ್ತು ವಿತರಣೆ ಮಾಡಿದರು.

ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ನಗರ ಸಭೆಯ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಉಡುಪಿ ನಗರ ಸಭೆಯ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ್, ಲೀಡ್ ಬ್ಯಾಂಕ್ ಪ್ರಬಂಧಕರಾದ ಹರೀಶ್ ಹಾಗೂ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ – ಸವಾರ ಮೃತ್ಯು, ಸಹಸವಾರ ಗಂಭೀರ