ಉಡುಪಿ ಶಾಸಕರ ವಿರುದ್ಧ ಅಪ್ರಬುದ್ಧ ಮತಿಗೇಡಿ ಹೇಳಿಕೆಯಿಂದ ಪ್ರಸಾದ್ ಕಾಂಚನ್ ರಾಜಕೀಯ ಅಜ್ಞಾನ ಬಯಲು : ಬಿಜೆಪಿ ನಗರ ಎಸ್.ಸಿ. ಮೋರ್ಚಾ ಅಧ್ಯಕ್ಷ ಅಜಿತ್ ಕಪ್ಪೆಟ್ಟು ವ್ಯಂಗ್ಯ

ಉಡುಪಿ : ಜಿಲ್ಲೆಗೆ ಯಾವುದೇ ಅನುದಾನ ನೀಡದೆ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಉಡುಪಿ ಶಾಸಕರು ರಾಜ್ಯ ಸರ್ಕಾರದ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿದ ಕೂಡಲೇ ಬುಡಕ್ಕೆ ಬೆಂಕಿ ಬಿದ್ದಂತೆ ಎದ್ದು ಬಿದ್ದು ಶಾಸಕರ ವಿರುದ್ಧ ಪತ್ರಿಕಾ ಹೇಳಿಕೆ ನೀಡುವ ಭರದಲ್ಲಿ ಪ್ರಸಾದ್ ಕಾಂಚನ್ ರಾಜಕೀಯವಾಗಿ ತಮ್ಮ ಬೌದ್ಧಿಕ ಅಜ್ಞಾನವನ್ನು ಜನತೆಯ ಮುಂದೆ ಬಿಚ್ಚಿಟ್ಟಿದ್ದಾರೆ ಎಂದು ಬಿಜೆಪಿ ಉಡುಪಿ ನಗರ ಎಸ್.ಸಿ. ಮೋರ್ಚಾ ಅಧ್ಯಕ್ಷ ಅಜಿತ್ ಕಪ್ಪೆಟ್ಟು ವ್ಯಂಗ್ಯವಾಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ 30 ಸಾವಿರ ಅಂತರದಲ್ಲಿ ಸೋತು ಸುಣ್ಣವಾಗಿರುವ ಪ್ರಸಾದ್ ಕಾಂಚನ್ ಇದೀಗ ಶಾಸಕರ ವಿರುದ್ಧ ಅರ್ಥಹೀನ ಪತ್ರಿಕಾ ಹೇಳಿಕೆ ನೀಡುವ ಮೂಲಕ ತನ್ನ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿರುವುದು ಜಗಜ್ಜಾಹೀರಾಗಿದೆ.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಆಮದು ಅಭ್ಯರ್ಥಿಯಾಗಿ ಕಾಂಗ್ರೆಸ್ ಕಾರ್ಯಕರ್ತರ ವಿಶ್ವಾಸ ಗಳಿಸಲು ವಿಫಲರಾದ ಪ್ರಸಾದ್ ಕಾಂಚನ್ ಇದೀಗ ಕಾಂಗ್ರೆಸ್ ಮುಖಂಡರ ಓಲೈಕೆಗಾಗಿ ಇಂತಹ ಬಾಲಿಶ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ.

ಪ್ರಸಾದ್ ಕಾಂಚನ್ ಸಹಿತ ಕಾಂಗ್ರೆಸ್ ಮುಖಂಡರಿಗೆ ಉಡುಪಿಯ ಜನತೆಯ ಬಗ್ಗೆ ಕಾಳಜಿ ಇದ್ದರೆ ಅಭಿವೃದ್ದಿಗಾಗಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪ್ರಸಕ್ತ ಸಾಲಿನಲ್ಲಿ ಬಿಡುಗಡೆ ಮಾಡಿರುವ ಅನುದಾನದ ಕುರಿತು ಸೂಕ್ತ ದಾಖಲೆಯೊಂದಿಗೆ ಬಹಿರಂಗ ಚರ್ಚೆಗೆ ಬರುವಂತೆ ಉಡುಪಿ ಶಾಸಕರು ಸವಾಲು ಹಾಕಿದ್ದರೂ ಇದುವರೆಗೂ ಮುಂದೆ ಬಂದಿಲ್ಲ.

ಸದಾ ಪ್ರಚಾರದ ತೆವಲಿನಿಂದ ಶಾಸಕರ ವಿರುದ್ಧ ಕ್ಷುಲ್ಲಕ ಹೇಳಿಕೆ ನೀಡುವ ಬದಲು ಪ್ರಸಾದ್ ಕಾಂಚನ್ ಮತ್ತು ಕಾಂಗ್ರೆಸ್ ಮುಖಂಡರು ಈಗಾಗಲೇ ಉಡುಪಿ ಜಿಲ್ಲಾಧಿಕಾರಿಗಳು ವರದಿ ನೀಡಿರುವಂತೆ ಪ್ರಾಕೃತಿಕ ವಿಕೋಪದ ಹಾನಿಯ ಪರಿಹಾರ ಮೊತ್ತ ಬಿಡುಗಡೆಗೆ ತಮ್ಮದೇ ಪಕ್ಷದ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಿ ಎಂದು ಅಜಿತ್ ಕಪ್ಪೆಟ್ಟು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್