ಹೆಡ್ ಕಾನ್‌ಸ್ಟೇಬಲ್ ಬಿ. ವಿಜಯ್ ಕುಮಾರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ

ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಆರ್‌ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್‌ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಬಿ. ವಿಜಯ್ ಕುಮಾರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಲಭಿಸಿದೆ. ಇವರು 1993‌ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು.

ಈತನಕ ಪಣಂಬೂರು, ಪುತ್ತೂರು ನಗರ, ಉರ್ವ, ಉಡುಪಿ ನಗರ, ಕುಂದಾಪುರ, ಉಡುಪಿ ಟ್ರಾಫಿಕ್, ಉಡುಪಿ ಮಹಿಳಾ ಠಾಣೆ ಮತ್ತು ಹಿರಿಯಡ್ಕ ಠಾಣೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ. 2022‌ರಲ್ಲಿ ಇವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ