Sunday, January 19, 2025
Banner
Banner
Banner
Home » ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಪರಿಣಾಮಕಾರಿ ಅನುಷ್ಟಾನಕ್ಕೆ ಆದ್ಯತೆ : ಯಶ್‌ಪಾಲ್ ಸುವರ್ಣ

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಪರಿಣಾಮಕಾರಿ ಅನುಷ್ಟಾನಕ್ಕೆ ಆದ್ಯತೆ : ಯಶ್‌ಪಾಲ್ ಸುವರ್ಣ

by NewsDesk

ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ನ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಎಮ್ಮೆಕೆರೆ, ಪಾಂಡೇಶ್ವರದ ರಮಾ ಲಕ್ಷ್ಮಿನಾರಾಯಣ್ ಸಭಾಭವನದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿ ಸದಸ್ಯರನ್ನು ಸ್ವಾಗತಿಸಿ ಮಾತನಾಡಿದ ಯಶ್‌ಪಾಲ್ ಎ. ಸುವರ್ಣ, ಕರಾವಳಿ ಜಿಲ್ಲೆಯ ಮೀನುಗಾರರ ಸಮಸ್ಯೆ ಬೇಡಿಕೆಗಳಿಗೆ ಹಲವು ದಶಕಗಳಿಂದ ಸ್ಪಂದಿಸಿ ಮೀನುಗಾರರ ಸಮಸ್ಯೆಗಳಿಗೆ ಧ್ವನಿಯಾಗಿ ಫೆಡರೇಷನ್ ಕಾರ್ಯನಿರ್ವಹಿಸುತ್ತಿದ್ದು, ಮೀನುಗಾರರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಮತ್ಸ್ಯ ಸಂಪದ ಯೋಜನೆಯನ್ನು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಡರೇಶನ್ ನೇತೃತ್ವದಲ್ಲಿ ಪರಿಣಾಮಕಾರಿಯಾಗಿ ಅನುಷ್ಠನಗೊಳಿಸಲು ವಿಶೇಷ ಆದ್ಯತೆ ನೀಡಲಾಗುವುದು ಎಂದರು.

ಫೆಡರೇಶನ್ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ 25 ಲಕ್ಷ ಪ್ರತಿಭಾ ಪುರಸ್ಕಾರ, ವರದಿ ಸಾಲಿನಲ್ಲಿ ಸಂಸ್ಥೆಯೊಂದಿಗೆ ವ್ಯವಹರಿಸುವ ಸದಸ್ಯ ಗ್ರಾಹಕರಿಗೆ ರೂ. 4 ಕೋಟಿ ಪ್ರೋತ್ಸಾಹಕ ಉಡುಗೊರೆ, ದೇಣಿಗೆ ಮತ್ತು ಬಡ ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಸುಮಾರು ರೂ. 20 ಲಕ್ಷ ಆರೋಗ್ಯನಿಧಿ ನೀಡಲಾಗಿದೆ.

ಸದಸ್ಯ ಸಹಕಾರಿ ಸಂಘಗಳ ಪ್ರತಿನಿಧಿಗಳಿಗೆ ತರಬೇತಿ ಕಾರ್ಯಗಾರ, ಸದಸ್ಯರಿಗೆ ಫೆಡರೇಶನಿನ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಆರೋಗ್ಯ ಶಿಬಿರ, ಕೆಲವೊಂದು ಆಯ್ದ ಕೇಂದ್ರಗಳಲ್ಲಿ ಫೆಡರೇಶನ್ ವತಿಯಿಂದ ಮತ್ಸ್ಯ ಕ್ಯಾಂಟಿನ್ ಆರಂಭಿಸುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಕಾರ್ಯೋನ್ಮುಖವಾಗಿದೆ. ಫೆಡರೇಶನ್ ವತಿಯಿಂದ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಹಕಾರದಿಂದ ಮಂಗಳೂರು ನಗರದ ಕೇಂದ್ರ ಭಾಗವಾದ ಉರ್ವ ಸ್ಟೋರ್‌ನಲ್ಲಿ ಆಧುನಿಕ ಸೌಲಭ್ಯಗಳನ್ನೊಳಗೊಂಡ ಸುಸಜ್ಜಿತ ‘ಮತ್ಸ್ಯ ಸಂಪದ’ ನೂತನ ಪ್ರಧಾನ ಕಚೇರಿ ಕಟ್ಟಡ ಹಾಗೂ ಸಮುದಾಯ ಭವನದ ಕಾಮಗಾರಿ ಪ್ರಗತಿಯಲಿದ್ದು, ಕೇಂದ್ರ ಪುರಸ್ಕೃತ ಉಳಿತಾಯ ಪರಿಹಾರ, ಮತ್ಸ್ಯಾಶ್ರಯ ವಸತಿ ಸಹಾಯಧನ ಏರಿಕೆ, ಅಂಬಿಗರ ಚೌಡಯ್ಯ ನಿಗಮದ ವಿದ್ಯಾರ್ಥಿ ವೇತನ, ಮೀನುಗಾರ ಮಹಿಳೆಯರ ಶೂನ್ಯ ಬಡ್ಡಿದರ ಸಾಲ ಸಹಿತ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠನಕ್ಕೆ ಫೆಡರೇಶನ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಹಾಗೂ ಪ್ರಾಥಮಿಕ ಮೀನುಗಾರ ಸಹಕಾರಿ ಸಂಸ್ಥೆಯ ಸದಸ್ಯರಿಗೆ ತರಬೇತಿ ಕಾರ್ಯಗಾರ ಹಾಗೂ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಗಾರವನ್ನು ಶೀಘ್ರದಲ್ಲೇ ಏರ್ಪಡಿಸಲಾಗುವುದು ಎಂದರು.

ಪ್ರಧಾನ ಮಂತ್ರಿ ಮತ್ಯಸಂಪದ ಯೋಜನೆಯಡಿ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮವು ಸಹಕಾರಿ ಸಂಘಗಳನ್ನು ಬಲವರ್ಧನೆಗೊಳಿಸಲು ಯೋಜನೆ ಅನುಷ್ಟಾನ ಸಂಸ್ಥೆಯಾಗಿ ಫೆಡರೇಶನನ್ನು ಆಗಿ ಆಯ್ಕೆ ಮಾಡಿದ್ದು, ಸಂಸ್ಥೆಯ ಸದಸ್ಯ ಸಹಕಾರಿ ಸಂಘಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರದ ಮೀನುಗಾರಿಕಾ ಯೋಜನೆಯನ್ನು ಅರ್ಹ ಮೀನುಗಾರರಿಗೆ ತಲುಪಿಸಲು ಫೆಡರೇಶನ್ ಕಾರ್ಯೋನ್ಮುಖವಾಗಲಿದೆ ಎಂದರು.

ಮಹಾಸಭೆಯಲ್ಲಿ ರಾಷ್ಟ್ರಮಟ್ಟದ ಅತ್ಯುತ್ತಮ ಮೀನುಗಾರಿಕಾ ಸಹಕಾರಿ ಸಂಘ ಪ್ರಶಸ್ತಿಗೆ ಭಾಜನರಾದ ಮಲ್ಪೆ ಯಾಂತ್ರಿಕ ಟ್ರಾಲ್ ದೋಣಿ ಮೀನುಗಾರರ ಪ್ರಾ. ಸಹಕಾರಿ ಸಂಘದ ಅಧ್ಯಕ್ಷ ರಾಮಚಂದ್ರ ಕುಂದರ್, ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ಬಿ. ಮಂಜುನಾಥ ಕುಂದರ್ ಹಾಗೂ ಆರ್ಯಭಟ ಪ್ರಶಸ್ತಿ ಪುರಸ್ಕೃತ ಸಾಹಿತಿ ಯೋಗೀಶ್ ಕಾಂಚನ್ ರವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಫೆಡರೇಶನಿನ 2023-24 ನೇ ವಾರ್ಷಿಕ ವರದಿಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಮಹಾಸಭೆಯಲ್ಲಿ ಮಂಡಿಸಿದರು. ಸಂಸ್ಥೆಯ ಅಭಿವೃದ್ಧಿಯ ಚಟುವಟಿಕೆಗಳ ಬಗ್ಗೆ ಹಾಗೂ ನಿರಂತರ ಲಾಭದಾಯಕವಾಗಿ ಮುನ್ನಡೆಸುತ್ತಿರುವ ಸಂಸ್ಥೆಯ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ನಿರ್ದೇಶಕರುಗಳಿಗೆ ಮಹಾಸಭೆಯಲ್ಲಿ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿದರು. ಸಭೆಯಲ್ಲಿ ಫೆಡರೇಶನಿನ ಉಪಾಧ್ಯಕ್ಷರಾದ ದೇವಪ್ಪ ಕಾಂಚನ್, ಸಹಕಾರಿ ಸಂಘಗಳ ಉಪನಿಬಂಧಕರಾದ ಲಾವಣ್ಯ, ಮಿನುಗಾರಿಕಾ ಉಪನಿರ್ದೇಶಕರಾದ ದಿಲೀಪ್, ವ್ಯವಸ್ಥಾಪಕ ನಿದೇರ್ಶಕರಾದ ದರ್ಶನ್ ಹಾಗೂ ಆಡಳಿತ ಮಂಡಳಿಯ ನಿದೇರ್ಶಕರು ಉಪಸ್ಥಿತರಿದ್ದರು.

You may also like

Leave a Comment

Maax-Media-Logo

Maax News covers major news and events of Udupi district. This channel provides detailed reports on the political, social, economic, and cultural life of Udupi district.

Maax News, equipped with the most sophisticated studio in Udupi, assures people comprehensive news coverage.

Copyrights © maaxmedia.in All Rights Reserved. Designed by Sabweb