ನಿತ್ಯ ವಿವಾದ-ಸುದ್ದಿಯಲ್ಲಿರುವ ಖಾಸಗಿ ಬಸ್ ಚಾಲಕ ನಿರ್ವಾಹಕರು ಬಿರಿಯಾನಿ ಹಂಚಿ ಸೌಹಾರ್ದ ಮೆರೆದರು!

ಉಡುಪಿ : ಸದಾ ಒಂದಿಲ್ಲೊಂದು ವಿವಾದ, ಗಲಾಟೆ ಮತ್ತು ಅಪಘಾತಗಳ ಕಾರಣದಿಂದಾಗಿ ಸುದ್ದಿಯಲ್ಲಿರುತ್ತಿದ್ದ ಉಡುಪಿ-ಕರಾವಳಿಯ ಖಾಸಗಿ ಬಸ್‌ನ ಚಾಲಕ, ನಿರ್ವಾಹಕರು‌ಗಳು ಈ ಬಾರಿ ವಿಶೇಷ ಕಾರಣಕ್ಕಾಗಿ ಮತ್ತೆ ಸುದಿಯಲ್ಲಿದ್ದಾರೆ.

ಜೂನ್ 17 ರಂದು ಕರಾವಳಿಯಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮದಿಂದ ಪ್ರೀತಿ, ತ್ಯಾಗ, ಬಲಿದಾನದ ಸಂಕೇತವಾಗಿ ಬಕ್ರಿದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭ ಉಚ್ಚಿಲದ ಖಾಸಗಿ ಬಸ್‌ನ ಮುಸ್ಲಿಂ ಚಾಲಕ, ನಿರ್ವಾಹಕರುಗಳು ತಮ್ಮ ಸಹೋದ್ಯೋಗಿ ಬಸ್ ಚಾಲಕ, ನಿರ್ವಾಹಕರುಗಳಿಗೆ ಬಿರಿಯಾನಿ ಹಂಚಿ ಸಂಭ್ರಮಪಟ್ಟರು.

ಉಡುಪಿ – ಮಂಗಳೂರು ನಡುವೆ ಸಂಚಾರ ನಡೆಸುವ ಖಾಸಗಿ ಎಕ್ಸ್‌ಪ್ರೆಸ್, ಸರ್ವಿಸ್ ಮತ್ತು ಇತರ ಬಸ್ಸುಗಳ ಸುಮಾರು 450 ಮಂದಿಗೆ ಬಕ್ರಿದ್ ಸಂಭ್ರಮದ ಅಂಗವಾಗಿ ಈ ತಂಡ ಬಿರಿಯಾನಿಯನ್ನು ವಿತರಿಸಿತು. ಇದೇ ಮಾರ್ಗದಲ್ಲಿ ಸಂಚಾರ ನಡೆಸುವ ಖಾಸಗಿ ಬಸ್‌ನ ಸಿಬ್ಬಂದಿಗಳಾದ ಜಾವೇದ್, ಶನವಾಜ್, ನಾಸಿರ್, ನಿಜಾಮ್, ಮೌಜಿ, ಮುನ್ನ ರವರ ತಂಡದ ಈ ಕಾರ್ಯಕ್ಕೆ ವಿವಿಧ ಬಸ್ಸಿನ ಮಾಲಕರು ಮತ್ತು ಇತರ ಸಿಬ್ಬಂದಿಗಳು ಕೂಡಾ ಸಾಥ್ ನೀಡಿದ್ದರು, “ನಾವೆಲ್ಲಾ ಒಂದೇ ವೃತ್ತಿಯನ್ನು ಮಾಡಿಕೊಂಡಿದ್ದು, ಬಕ್ರೀದ್ ಹಬ್ಬದ ಸಂಭ್ರಮವನ್ನು ಇನ್ನಷ್ಟು ಸಂತುಷ್ಟ ಗೊಳಿಸಲು ನಾವು ಬಿರಿಯಾನಿ ನೀಡಿದ್ದೇವೆ” ಎನ್ನುತ್ತಾರೆ ತಂಡದ ಸದಸ್ಯ ಜಾವೇದ್. ಸದಾ ವಿವಿಧ ಕೋಮು ಸೂಕ್ಷ್ಮ ವಿಷಯಗಳಿಗೆ ಸುದ್ದಿಯಲ್ಲಿರುತ್ತಿದ್ದ ಕರಾವಳಿಯಲ್ಲಿ ಇಂತಹ ಯುವಕರ ಸೌಹಾರ್ದದ ನಡೆಗಳು, ಸೌಹಾರ್ದೆತೆಯ ಹೊಸ ಹುರುಪನ್ನು ಮೂಡಿಸಿವೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ