ಫರಂಗಿಪೇಟೆಯಲ್ಲಿ ಖಾಸಗಿ ಬಸ್ ಪಲ್ಟಿ : ಹಲವು ಪ್ರಯಾಣಿಕರಿಗೆ ಗಾಯ

ಮಂಗಳೂರು : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ರಾಷ್ಟೀಯ ಹೆದ್ದಾರಿಯ ಫರಂಗಿಪೇಟೆ ಸಮೀಪ ಹತ್ತನೇ ಮೈಲ್ ಕಲ್ಲು ಎಂಬಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ವಿಭಜಕದ ಮಧ್ಯೆ ಇರುವ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಎರಡು ಮರಗಳಿಗೆ ಢಿಕ್ಕಿ ಹೊಡೆದು ಉರುಳಿಬಿದ್ದಿದೆ. ಇದರಿಂದ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ