ಕರ್ನಾಟಕ ಬಂದ್‌ಗೆ ಖಾಸಗಿ ಬಸ್ ಮಾಲಕರ ಸಂಘದ ನೈತಿಕ ಬೆಂಬಲ; ರಾಜ್ಯಾದ್ಯಂತ ಖಾಸಗಿ ಬಸ್‌ಗಳು ಎಂದಿನಂತೆ ಸಂಚಾರ

ಉಡುಪಿ : ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಮಾ.22ರಂದು ನಡೆಯಲಿರುವ ಕರ್ನಾಟಕ ಬಂದ್‌ಗೆ ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘ ನೈತಿಕ ಬೆಂಬಲ ನೀಡಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎಂದಿನಂತೆ ಬಸ್‌ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡಕ್ಕೆ ಅನ್ಯಾಯವಾದಾಗ ಖಾಸಗಿ ಬಸ್ ಮಾಲಕರು ಒಟ್ಟಿಗೆ ಇದ್ದೇವೆ. ಆದರೆ, ಸಾರ್ವಜನಿಕರಿಗೆ ತೊಂದರೆ ಆಗುವುದರಿಂದ ಯಾವುದೇ ಖಾಸಗಿ ಬಸ್‌ಗಳ ಬಂದ್ ಇರುವುದಿಲ್ಲ. ಎಲ್ಲ ಬಸ್‌ಗಳು ಎಂದಿನಂತೆ ಓಡಾಡಲಿವೆ. ಬಂದ್‌ಗೆ ನೈತಿಕ ಬೆಂಬಲ ಸೂಚಿಸಿದ್ದೇವೆ ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯುತ್ತಿದ್ದು, ಬಸ್ ಬಂದ್ ಮಾಡಿದ್ರೆ ಮಕ್ಕಳಿಗೂ ತೊಂದರೆ ಆಗುತ್ತದೆ. ಅಲ್ಲದೆ, ಆಸ್ಪತ್ರೆಗೆ ಹೋಗುವವರಿಗೆ, ದೂರದ ಊರಿಗೆ ಹೋಗುವವರಿಗೆ ಸಮಸ್ಯೆ ಆಗುತ್ತದೆ. ಈ ಹಿನ್ನೆಲೆಯಲ್ಲಿ ಬಂದ್‌ಗೆ ನೈತಿಕ ಬೆಂಬಲ ಕೊಟ್ಟಿದ್ದೇವೆ. ಬಸ್‌ಗಳು ಎಂದಿನಂತೆ ಸಂಚಾರ ನಡೆಸಲಿವೆ ಎಂದು ತಿಳಿಸಿದರು.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ