ಪ್ರಿಯದರ್ಶಿನಿ ಪಿ. ರವರ “ಕೀಕಾ” ಕೃತಿ ಲೋಕಾರ್ಪಣೆ

ಉಡುಪಿ : ವೃತ್ತಿಯಲ್ಲಿ ಓರ್ವ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದುಕೊಂಡು ಪ್ರವೃತ್ತಿಯಲ್ಲಿ ಓದುವ, ಬರೆಯುವ ಹವ್ಯಾಸವನ್ನು ನೆಚ್ಚಿಕೊಂಡಿರುವ ಪ್ರಿಯದರ್ಶಿನಿ ಅವರ “ಕೀಕಾ” ಕೃತಿಯ ಬಿಡುಗಡೆ ಸಮಾರಂಭವು 12.07.2024ನೇ ಶುಕ್ರವಾರ ಬೆಳಿಗ್ಗೆ ಗಂಟೆ 11ಕ್ಕೆ ಉಡುಪಿ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಮಾರಂಭದ ಅಧ್ಯಕ್ಷತೆ ವಹಿಸಿ ಕೃತಿ ಬಿಡುಗಡೆ ಗೊಳಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಹಾಸ್ಯ ಕವಿ, ಲೇಖಕ ಶಾಂತರಾಜ ಐತಾಳ್, ಅತಿಥಿಗಳಾಗಿ ಕಸಾಪ ತಾಲೂಕು ಘಟಕದ ಅಧ್ಯಕ್ಷ ರವಿರಾಜ ಎಚ್.ಪಿ, ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು, ಸೀತಾ ಬುಕ್‌‌‌ಹೌಸ್ ಮಾಲಕಿ ಶಾಂಭವಿ ಪೈ, ಲೇಖಕಿ ಪ್ರಿಯದರ್ಶಿನಿ ಪಿ, ಉಜ್ವಲ ಡೆವಲಪರ್ಸ್‌ನ ಪುರುಷೋತ್ತಮ ಶೆಟ್ಟಿ, ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ರಾಮು ಹಾಗೂ ಜಿ. ಶಂಕರ್ ಸರಕಾರಿ ಕಾಲೇಜಿನ ಸಹ ಪ್ರಾಧ್ಯಾಪಕ ರಾಜೇಂದ್ರ ಇವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈಕೆ ಉಡುಪಿ ಡಿವೈಎಸ್ಪಿ ಡಿ.ಟಿ ಪ್ರಭುರವರ ಪುತ್ರಿ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ