ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣದ ಗಣೇಶ ವಿಗ್ರಹಗಳ ತಯಾರಿ, ಮಾರಾಟಕ್ಕೆ ನಿಷೇಧ

ಉಡುಪಿ : ಪ್ರಸಕ್ತ ಸಾಲಿನ ಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು ಈ ಸಂದರ್ಭ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದಾಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಮಟ್ಟವು ಮಾರ್ಪಟಾಗಿ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗು‌ವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಇತರೇ ಜಲಚರಗಳ ಜೀವಕ್ಕೆ ಆಪಾಯ ಉಂಟಾಗುತ್ತದೆ. ಜೊತೆಗೆ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ.

ಆದ್ದರಿಂದ ಉಚ್ಚ ನ್ಯಾಯಾಲಯದ ಆದೇಶ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆ‌ಯಂತೆ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸ‌ರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್‌ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಇನ್ನು ಮುಂದೆ ಜಿಲ್ಲೆಯ ಯಾವುದೇ ಕೆರೆ, ಬಾವಿ, ಕಟ್ಟೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.

ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ವ್ಯಾಪಾರ ಲೈಸ್ಸನ್ ನೀಡಬಾರದು ಮತ್ತು ಲೈಸನ್ಸ್ ಪಡೆಯದೇ ಅನಧಿಕೃತವಾಗಿ ತಯಾರಿ/ ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ