ಎಸೆಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ

ಉಡುಪಿ : 2025‌ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಗಳು ಮಾರ್ಚ್ 21ರಿಂದ ಎಪ್ರಿಲ್ 4ರವರೆಗೆ ಜಿಲ್ಲೆಯಲ್ಲಿ ನಿಗದಿ ಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.

ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್‌ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿ
ಘೋಷಿಸಿದ್ದಾರೆ.

ಪರೀಕ್ಷೆಯ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಐದು ಹಾಗೂ ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದನ್ನು ಸಹ ನಿಷೇಧಿಸಲಾಗಿದೆ.

ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ 200ಮೀ. ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್ ಗಳನ್ನು ಸಹ ಮುಚ್ಚಲು ಆದೇಶಿಸಲಾಗಿದೆ. ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಿಗೆ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Related posts

ಮಲ್ಪೆ ಆದಿ ಉಡುಪಿ ಹೆದ್ದಾರಿ ಕಾಮಗಾರಿ ಅಧಿಕಾರಿಗಳೊಂದಿಗೆ ಶಾಸಕ ಯಶ್‌ಪಾಲ್ ಸುವರ್ಣ ಸಭೆ

ಮಂಗಳೂರಿನಲ್ಲಿ ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಕೇರಳದಿಂದ ಕೊಲ್ಲೂರಿಗೆ ಹೊರಟಿದ್ದ ಟಿಟಿ ವಾಹನ ಪಲ್ಟಿ – ಹಲವರಿಗೆ ಗಾಯ