ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ : ಇಬ್ಬರ ಬಂಧನ; ಯುವತಿಯ ರಕ್ಷಣೆ

ಮಣಿಪಾಲ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಪೆರಂಪಳ್ಳಿಯ ಅರ್ಪಾಟ್‌‌ಮೆಂಟ್‌ವೊಂದರಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಉಡುಪಿ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ ರವರ ನಿರ್ದೇಶನದಂತೆ ಮಣಿಪಾಲ ಠಾಣೆಯ ಪಿ.ಐ ದೇವರಾಜ್‌ ಟಿ ವಿ ನೇತೃತ್ವದಲ್ಲಿ ಪಿಎಸ್‌ಐ ಅನೀಲ್‌, ಎಎಸ್‌ಐ ವಿವೇಕ್‌ ಹಾಗೂ ಸಿಬ್ಬಂದಿಗಳಾದ ವಿದ್ಯಾ, ಇಮ್ರಾನ್‌, ಪ್ರಸನ್‌, ಮಂಜುನಾಥ‌ರವರನ್ನೊಳಗೊಂಡ ತಂಡ ಅರ್ಪಾಟ್‌‌ಮೆಂಟ್‌ಮೇಲೆ ದಾಳಿ ಮಾಡಿ ಅನೈತಿಕ ವೇಶ್ಯಾವಾಟಿಕೆ ವ್ಯವಹಾರ ನಡೆಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ರಘುನಂದನ್‌ (40) ಹಾಗೂ ದಾವರಣಗೆರೆ ಜಿಲ್ಲೆ ಹರಿಹರದ ಅಮೀನಾ ಬೇಗಂ (55) ಎಂದು ಗುರುತಿಸಲಾಗಿದೆ.

ಆರೋಪಿಗಳು ವೇಶ್ಯಾವಾಟಿಕೆ ವ್ಯವಹಾರ ನಡೆಸಲು ಬಳಸಿಕೊಂಡಿದ್ದ ಬೆಂಗಳೂರು ಮೂಲದ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಹಾಸನ ಜಿಲ್ಲೆಯ ಹಿರೀಸಾವೆ ಗ್ರಾಮದ ರವೀಶ್‌ ಎಂಬ ಆರೋಪಿ ಬಂಧನಕ್ಕೆ ಮಣಿಪಾಲ ಠಾಣಾ ಪಿ.ಐ ದೇವರಾಜ್‌ ಟಿ ವಿ ನೇತೃತ್ವದ ತಂಡ ತನಿಖೆ ಮುಂದುವರೆಸಿದೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ಈ ಮಣಿಪಾಲ ಪೊಲೀಸರ ಕಾರ್ಯಚರಣೆಗೆ ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ