ಮಣಿಪಾಲದ ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ : ಪ್ರಕರಣ ದಾಖಲು

ಮಣಿಪಾಲ : ಖಾಸಗಿ ಲಾಡ್ಜ್‌ವೊಂದರಲ್ಲಿ ಅಕ್ರಮ, ಲಾಭಕ್ಕಾಗಿ ಬಲವಂತವಾಗಿ ಮಹಿಳೆಯನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಘಟನೆ 80 ಬಡಗಬೆಟ್ಟು ಗ್ರಾಮದಲ್ಲಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಮಣಿಪಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದಾಳಿಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದು, ರೂಮ್‌ನಲ್ಲಿದ್ದ ಪಶ್ಚಿಮ ಬಂಗಾಲ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುವ ಸಂತ್ರಸ್ತ ಯುವತಿಯನ್ನು ರಕ್ಷಿಸಲಾಗಿದೆ.

ಈ ಕೃತ್ಯದ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಸಂತ್ರಸ್ತೆ ನೀಡಿರುವ ಮಾಹಿತಿಯಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ