ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳ ವಿರೋಧಿಸಿ ಪ್ರತಿಭಟನೆ

ಕಾಪು : ಗ್ಯಾರಂಟಿಗಳಿಗೆ ಹಣ ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ನಿಲುವು ಖಂಡಿಸಿ ಇಂದು ಕಾಪು ಮಂಡಲ ಬಿಜೆಪಿ ವತಿಯಿಂದ ಅಲೆವೂರು ರಾಮನಗರ ಬಳಿ ಪ್ರತಿಭಟನೆ‌ಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ವೇಳೆ ಸ್ಕೂಟರ್‌ನ್ನು ಚಟ್ಟದ ಮೇಲೆ ಇರಿಸಿ ಅಣಕು ಶವಯಾತ್ರೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ. ಸುವರ್ಣ, ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಉಪಾಧ್ಯಕ್ಷ ದಿನಕರ್ ಬಾಬು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್‌, ಶರಣ್ ಮಟ್ಟು, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ