ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ ವಿರೋಧಿಸಿ – ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ

ಮಂಗಳೂರು : ಎಂಎಲ್‌ಸಿ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ ನಡೆಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ವೆಲೆನ್ಸಿಯಾದಲ್ಲಿರುವ ಐವನ್ ಡಿಸೋಜ ಮನೆಯಿಂದ ಕಂಕನಾಡಿ ಜಂಕ್ಷನ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.

ಬೆಳಗ್ಗೆಯೇ ಐವನ್ ಡಿಸೋಜ ಮನೆ ಪರಿಸರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದರು. ಬಳಿಕ ಸರತಿ ಸಾಲಿನಲ್ಲಿ ಮೆರವಣಿಗೆ ಕಂಕನಾಡಿ ಜಂಕ್ಷನ್‌ವರೆಗೆ ನಡೆಯಿತು. ಮೆರವಣಿಗೆ ವೇಳೆ ಗೋಬ್ಯಾಕ್ ಗವರ್ನರ್ ಘೋಷಣೆ ಕೇಳಿ ಬಂತು. ಅಲ್ಲದೆ ಶಾಸಕರಾದ ಡಾ. ವೈ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಅವರ ವಿರುದ್ಧ ಘೋಷಣೆ ಕೇಳಿಬಂತು.

250ಕ್ಕಿಂತಲೂ ಅಧಿಕ ಮಂದಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಬಳಿಕ ಕಂಕನಾಡಿ ಜಂಕ್ಷನ್ ಮುಂಭಾಗ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ವಕ್ತಾರ ಎಂ.ಜಿ.ಹೆಗಡೆ, ಎಂಎಲ್‌ಸಿ ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್. ಲೋಬೊ ಮತ್ತಿತರರು ಮಾತನಾಡಿದರು.

Related posts

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ

ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಿಗೆ ಭಕ್ತರಿಂದ 1.5 ಲಕ್ಷ ಚೆಂಡು ಮಲ್ಲಿಗೆ ಸಮರ್ಪಣೆ