ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ ಆದೇಶವನ್ನು ಖಂಡಿಸಿ ಪ್ರತಿಭಟನೆ..!!

ಉಡುಪಿ : ಪ್ರವಾಸಿ ವಾಹನ‌ಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ ಆದೇಶವನ್ನು ಖಂಡಿಸಿ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್, ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್‌ ಮತ್ತು ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಜೇಷನ್ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ ಉಡುಪಿಯ ನಿಕಟಪೂರ್ವ ಶಾಸಕರು, ಉಡುಪಿ ಜಿಲ್ಲಾ ಟ್ಯಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಅಧ್ಯಕ್ಷರಾದ ಕೆ ರಘುಪತಿ ಭಟ್ ಅವರು ಭಾಗವಹಿಸಿ ವಾಣಿಜ್ಯ ವಾಹನಗಳು, ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್‌ಗಳಿಗೆ ಜಿ.ಪಿ.ಎಸ್. ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ ಮಾಡಬಾರದಾಗಿ ಸರ್ಕಾರವನ್ನು ಒತ್ತಾಯಿಸಿದರು.

ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ ಕಷ್ಟ ಸಾಧ್ಯ ಅದರ ವೆಚ್ಚವನ್ನು ಮಧ್ಯಮ ವರ್ಗದ ನಾವು ದುಬಾರಿ ವೆಚ್ಚ ಬರಿಸಲು ಸಾಧ್ಯವಿಲ್ಲ.. ಹೊಸ ಪ್ರವಾಸಿ ವಾಹನಗಳಿಗೆ ಇದನ್ನು ಕಡ್ಡಾಯ ಗೊಳಿಸಲಿ.. ಹಳೆ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅವಶ್ಯಕತೆ ಇಲ್ಲ.. ಜೊತೆಗೆ ಸರ್ಕಾರದಿಂದ ನವೆಂಬರ್ ತನಕ ಅವಕಾಶ ಇದ್ದರು ಕೂಡ ಸ್ಥಳೀಯ ಅಧಿಕಾರಿ‌ಗಳು ಎಫ್‌ಸಿ ನವಿಕರಣ ಮಾಡುತ್ತಿಲ್ಲ. ಹೀಗಾಗಿ ನಾವು ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ ಆದೇಶವನ್ನು ಹಿಂಪಡೆಯುವವರೆಗೂ ನಿರಂತರ ಹೋರಾಟ ಮಾಡುತ್ತೇವೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !