ಬಿ ವೈ ವಿಜಯೇಂದ್ರ ಬಂಧನ ಖಂಡಿಸಿ ಬಿಜೆಪಿಯಿಂದ ಉಡುಪಿಯಲ್ಲಿ ಪ್ರತಿಭಟನೆ

ಉಡುಪಿ : ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರನ್ನು ಬಂಧಿಸಿ ಪ್ರತಿಭಟನೆಯ ಸಾಂವಿಧಾನಿಕ ಹಕ್ಕನ್ನು ಮೊಟಕುಗಿಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಪ್ರತಿಭಟನೆ ಇಂದು ಸಂಜೆ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ ಅವರು ಮಾತನಾಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹೆರ್ಗ ದಿನಕರ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರುಗಳಾದ ಪೆರ್ನಾಂಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದಬೆಟ್ಟು, ಜಿಲ್ಲಾ ವಕ್ತಾರೆ ಗೀತಾಂಜಲಿ ಸುವರ್ಣ, ಜಿಲ್ಲಾ ಕಾರ್ಯದರ್ಶಿ ನಳಿನೀ ಪ್ರದೀಪ್, ಜಿಲ್ಲಾ ಒಬಿಸಿ ಮೋರ್ಚಾದ ಅಧ್ಯಕ್ಷರಾದ ವಿಜಯ್ ಕೊಡವೂರು, ಮಟ್ಟಾರು ರತ್ನಾಕರ ಹೆಗ್ಡೆ, ತಿಂಗಳೇ ವಿಕ್ರಮಾರ್ಜುನ ಹೆಗ್ಡೆ,ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ ಶೆಟ್ಟಿ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಪ್ರಥ್ವಿರಾಜ್ ಬಿಲ್ಲಾಡಿ ಜಿಲ್ಲಾ ಮಾದ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಶಿವಕುಮಾರ, ಸತ್ಯಾನಂದ ನಾಯಕ, ವೀಣಾ ಶೆಟ್ಟಿ, ಸಹಿತ ಹಲವು ನಾಯಕರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ