ಕಂಚಿನಡ್ಕದಲ್ಲಿ ಸ್ಥಾಪಿಸಲು ಉದ್ದೇಶಿಸಿರು ಟೋಲ್‌‌ಗೇಟ್‌ ರದ್ದತಿಗೆ ಆಗ್ರಹಿಸಿ ಆ.21ರಂದು ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಕಾಪು : ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲು ಉದ್ದೇಶಿಸಿರು ಟೋಲ್‌ ಗೇಟ್‌ ರದ್ದತಿಗೆ ಆಗ್ರಹಿಸಿ ಆ. 21ರಂದು ಕಾಂಗ್ರೆಸ್‌ ನೇತೃತ್ವದಲ್ಲಿ ಕಂಚಿನಡ್ಕದಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ಹೇಳಿದ್ದಾರೆ.

ಕಾಪು ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಬೃಹತ್‌ ಪ್ರತಿಭಟನೆಯ ಬಳಿಕ ಮರುದಿನ ಆ.22ರಂದು ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಸಹಿತ ವಿವಿಧ ಸಚಿವರನ್ನೊಳಗೊಂಡ ನಿಯೋಗದೊಂದಿಗೆ ಮುಖ್ಯಮಂತ್ರಿಗಳ ಬಳಿಗೆ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.

ಈ ಟೋಲ್‌ ಪ್ರಕ್ರಿಯೆ ಯಡಿಯೂರಪ್ಪ ಸರಕಾರ ಇರುವಾಗ ಆರಂಭಗೊಂಡದ್ದಾಗಿದೆ. ಬೆಳ್ಮಣ್‌ನಲ್ಲಿ ಹೋರಾಟಗಾರರ ಪ್ರತಿಭಟನೆಗೆ ಹೆದರಿ ಬೊಮ್ಮಾಯಿ ಸರಕಾರ ಅದನ್ನು ಕಂಚಿನಡ್ಕಕ್ಕೆ ರವಾನಿಸಿದೆ. ಈಗ ಇಲ್ಲಿಂದಲೂ ಅದನ್ನು ಓಡಿಸುವ ಉದ್ದೇಶಕ್ಕಾಗಿ ಈ ಹೋರಾಟ ನಡೆಯಲಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಕಾಪು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಕೆಪಿಸಿಸಿ ಕಾರ್ಯದರ್ಶಿ ಡಾ. ದೇವಿಪ್ರಸಾದ್‌ ಶೆಟ್ಟಿ ಬೆಳಪು, ಕಾಪು ಬ್ಲಾಕ್‌ ಪ್ರಚಾರ ಸಮಿತಿ ಅಧ್ಯಕ್ಷ ಜಿತೇಂದ್ರ ಫುರ್ಟಾಡೊ, ಅಲ್ಪಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷ ಶರ್ಫುದ್ದೀನ್‌ ಶೇಖ್‌, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ಕಾಪು ಬ್ಲಾಕ್‌ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಮೀಜ್‌ ಹುಸೇನ್‌ ಪಡುಬಿದ್ರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು