ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಉಡುಪಿ : ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು) ನೇತೃತ್ವದಲ್ಲಿ 11 ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆದು ಬಳಿಕ ಅಪರ ಜಿಲ್ಲಾಧಿಕಾರಿ ಮಮತಾದೇವಿ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಕಾರ್ಮಿಕ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ರಾಜ್ಯ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ‌ಯವರು ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಕಾರ್ಯದರ್ಶಿ ಶಶಿಧರ ಗೋಲ್ಲ ಪ್ರಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮುಖಂಡರಾದ ದಯನಂದ ಕೋಟ್ಯಾನ್, ಸರೋಜ, ಗಣೇಶ ನಾಯಕ್, ಸುಭಾಷ್ ನಾಯಕ್, ರಾಮ ಕಾರ್ಕಡ, ವಾಮನಪೂಜಾರಿ, ಸೈಯದ್, ರಮೇಶ್, ಸಂಜೀವ ನಾಯಕ್, ಚಂದ್ರನಾಯಕ್ ಮತ್ತಿತರರು ಉಪಸ್ಥಿತರಿದ್ದರು.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ