ಶಾಸಕ ಭರತ್ ಶೆಟ್ಟಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಮಂಗಳೂರು : ಅಡ್ಡೂರು ಮಿನಿ ಪಾಕಿಸ್ತಾನ ಹೇಳಿಕೆ ನೀಡಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಬಂಧನಕ್ಕೆ ಆಗ್ರಹಿಸಿ ಅಡ್ಡೂರು ನಾಗರಿಕ ಸಮಿತಿ ನೇತೃತ್ವದಲ್ಲಿ ರವಿವಾರ ಅಡ್ಡೂರು ಜಂಕ್ಷನ್‌ನಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು.

ಪ್ರತಿಭಟನಾ ಉದ್ದೇಶಿಸಿ ಅಡ್ಡೂರು ಬದ್ರಿಯಾ ಜುಮಾ ಮಸೀದಿ ಖತೀಬ್ ಸದಖತುಲ್ಲಾ ಫೈಝಿ, ಮಾಜಿ ಜಿ.ಪಂ. ಸದಸ್ಯ ಯು.ಪಿ.ಇಬ್ರಾಹಿಂ, ಅಶ್ರಫ್ ನಡುಗುಡ್ಡೆ ಮಾತನಾಡಿದರು.

ಈ ಸಂದರ್ಭ ಅಡ್ಡೂರು ಜುಮಾ ಮಸೀದಿ ಅಧ್ಯಕ್ಷ ಅಹ್ಮದ್ ಬಾವ ಅಂಗಡಿ ಮನೆ, ಉಪಾಧ್ಯಕ್ಷ ಎ.ಕೆ.ಅಶ್ರಫ್, ಹಾಜಿ ಎಂ.ಎಚ್. ಮೊಯ್ದೀನ್, ಅಡ್ಡೂರು ಅಲ್ ಬಿರ್ರ್ ಅಧ್ಯಕ್ಷ ಎಂ.ಎಸ್.ಶೇಖಬ್ಬ, ಜಾಬಿರ್ ಫೈಝಿ, ಗುರುಪುರ ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬದ್ರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಝೈನುದ್ದೀನ್ ಸ್ವಾಗತಿಸಿದರು, ಅಸ್ತಾರ್ ಅಡ್ಡೂರು ಕಾರ್ಯಕ್ರಮ ನಿರೂಪಿಸಿದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ