ಮಂಗಳೂರು ಪೊಲೀಸ್ ಕಮೀಷನ‌ರ್ ಅನುಪಮ್ ಅಗರ್ವಾಲ್‌ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ

ಉಡುಪಿ : ಜನ ವಿರೋಧಿ, ಸರ್ವಾಧಿಕಾರಿ ಧೋರಣೆಯ ಮಂಗಳೂರು ಪೋಲಿಸ್ ಕಮೀಷನ‌ರ್ ಅನುಪಮ್ ಅಗರ್ವಾಲ್‌ ವರ್ಗಾವಣೆಗೊಳಿಸುವಂತೆ ಒತ್ತಾಯಿಸಿ ಸಿಪಿಐಎಂ, ದಲಿತ ಸಂಘರ್ಷ ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐಎಂ ಉಡುಪಿ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಸಿಪಿಐಎಂ ಮುಖಂಡರ ಮೇಲೆ ಹಾಕಿರುವ ಕೇಸನ್ನು ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಕೂಡಲೇ ವಾಪಾಸು ಪಡೆಯಬೇಕು. ಅಕ್ರಮ ಮರಳುಗಾರಿಕೆ, ಬೆಟ್ಟಿಂಗ್, ಮಸಾಜ್ ಪಾರ್ಲರ್ ದಂಧೆ‌ಕೋರರನ್ನು ಬಂಧುಗಳಂತೆ ನೋಡುವ ಮಂಗಳೂರು ಪೋಲಿಸ್ ಕಮೀಷನ‌ರ್ ಅನುಪಮ್ ಅಗರ್ವಾಲ್‌ ಅವರನ್ನು ಕೂಡಲೇ ತನಿಖೆಗೆ ಒಳಪಡಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ತೀವ್ರವಾದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತ‌ರ್, ವಲಯ ಕಾರ್ಯದರ್ಶಿ ಶಶಿಧರ ಗೊಲ್ಲ, ಜಿಲ್ಲಾ ಸಮಿತಿ ಸದಸ್ಯರಾದ ಕವಿರಾಜ್ ಎಸ್. ಕಾಂಚನ್, ಮುಖಂಡರಾದ ವೆಂಕಟೇಶ್ ಕೋಣಿ ಮತ್ತಿತರರು ಉಪಸ್ಥಿತರಿದ್ದರು.

Related posts

ಕುತ್ತಾರುವಿನ ಕೊರಗಜ್ಜನ ಆದಿ ಕ್ಷೇತ್ರಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಭೇಟಿ

ನವಜಾತ ಶಿಶುಗಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸಿ : ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಸೂಚನೆ

ಡಿಸೆಂಬರ್ 6ರಂದು ವಿಪಕ್ಷ ನಾಯಕ ಆರ್. ಅಶೋಕ್ ಉಡುಪಿಗೆ