ಕಾರ್ಕಳ : ಕನಿಷ್ಟ ಕೂಲಿ, ತುಟ್ಟಿಭತ್ಯೆ ಕಡಿತಗೊಳಿಸಿದ ಕರ್ನಾಟಕ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಇಂದು ಕಾರ್ಕಳ ತಾಲೂಕು ಕಛೇರಿ ಮುಂದೆ ಆದೇಶದ ಪ್ರತಿ ಸುಟ್ಟು ಪ್ರತಿಭಟನೆ ನಡೆಸಲಾಯಿತು. ನಂತರ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಹಾಗೂ ಕಾರ್ಮಿಕ ಸಚಿವರಿಗೆ ಮನವಿ ನೀಡಲಾಯಿತು.
ಪ್ರತಿಭಟನೆ ಸಭೆಯಲ್ಲಿ ಉಡುಪಿ ಜಿಲ್ಲಾ ಫೆಡರೇಷನ್ ಕಾರ್ಯದರ್ಶಿ ಉಮೇಶ್ ಕುಂದರ್, ಉಪಾಧ್ಯಕ್ಷರಾದ ಬಲ್ಕೀಸ್, ಬೀಡಿ & ಟೋಬ್ಯಾಕೊ ಲೇಬರ್ ಯೂನಿಯನ್ ಅಧ್ಯಕ್ಷರಾದ ನಳಿನಿ.ಎಸ್., ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ಸುನೀತಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್.ಕಾಂಚನ್, ಕೋಶಾಧಿಕಾರಿ ಸುಮತಿ, ಸಮಿತಿ ಸದಸ್ಯರಾದ ಶಕುಂತಲಾ, ಪ್ರತಿಮಾ, ಸುಮಿತ್ರಾ, ಪುಷ್ಪ ಉಪಸ್ಥಿತರಿದ್ದರು.
