ಕನಿಷ್ಟ ಕೂಲಿ, ತುಟ್ಟಿಭತ್ಯೆ ಕಡಿತಗೊಳಿಸಿದ ರಾಜ್ಯ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಪ್ರತಿಭಟನೆ

ಕಾರ್ಕಳ : ಕನಿಷ್ಟ ಕೂಲಿ, ತುಟ್ಟಿಭತ್ಯೆ ಕಡಿತಗೊಳಿಸಿದ ಕರ್ನಾಟಕ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಇಂದು ಕಾರ್ಕಳ ತಾಲೂಕು ಕಛೇರಿ ಮುಂದೆ ಆದೇಶದ ಪ್ರತಿ ಸುಟ್ಟು ಪ್ರತಿಭಟನೆ ನಡೆಸಲಾಯಿತು. ನಂತರ ತಹಶೀಲ್ದಾರರ ಮುಖಾಂತರ ಮುಖ್ಯ‌ಮಂತ್ರಿ ಹಾಗೂ ಕಾರ್ಮಿಕ ಸಚಿವರಿಗೆ ಮನವಿ ನೀಡಲಾಯಿತು.

ಪ್ರತಿಭಟನೆ ಸಭೆಯಲ್ಲಿ ಉಡುಪಿ ಜಿಲ್ಲಾ ಫೆಡರೇಷನ್‌ ಕಾರ್ಯದರ್ಶಿ ಉಮೇಶ್ ಕುಂದರ್, ಉಪಾಧ್ಯಕ್ಷ‌ರಾದ ಬಲ್ಕೀಸ್, ಬೀಡಿ & ಟೋಬ್ಯಾಕೊ ಲೇಬರ್ ಯೂನಿಯನ್ ಅಧ್ಯಕ್ಷ‌ರಾದ ನಳಿನಿ.ಎಸ್., ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ಸುನೀತಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್.ಕಾಂಚನ್, ಕೋಶಾಧಿಕಾರಿ ಸುಮತಿ, ಸಮಿತಿ ಸದಸ್ಯರಾದ ಶಕುಂತಲಾ, ಪ್ರತಿಮಾ, ಸುಮಿತ್ರಾ, ಪುಷ್ಪ ಉಪಸ್ಥಿತರಿದ್ದರು.

Related posts

ಕೋಟದಲ್ಲಿ ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಮತ್ಸ್ಯಗಂಧ ರೈಲಿನಲ್ಲಿ ಲಕ್ಷಾಂತರ ಮೌಲ್ಯದ ವಜ್ರಾಭರಣ ಕಳವು – ದೂರು ದಾಖಲು

65 ಲಕ್ಷ ರೂಪಾಯಿ ಮೊತ್ತದಲ್ಲಿ ಆರೋಗ್ಯ ಉಪ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಚಾಲನೆ