ಹಂಪ್ಸ್ ದುರಸ್ಥಿಗಾಗಿ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ

ಕುಂದಾಪುರ : ಕುಂದಾಪುರ ನಗರದ ದೇವಸ್ಥಾನವೊಂದರ ರಥೋತ್ಸವದ ನಿಮಿತ್ತ ಕುಂದಾಪುರ ಪುರಸಭೆಯ ಅನುಮತಿಯೊಂದಿಗೆ ರಥದ ಸುಗಮ ಚಲನೆಗಾಗಿ ನರದೆಲ್ಲೆಡೆ ಹಂಪನ್ನು ಅರಬರೆ ಕೀಳಲಾಗಿದ್ದು ಕಳೆದ 6 ತಿಂಗಳಿನಿಂದ ಪುರಸಭೆಯವರು ಹಂಪ್‌ ದುರಸ್ತಿಯ ಬಗ್ಗೆ ಗಮನ ಹರಿಸದೇ ನಿರ್ಲಕ್ಷ್ಯ ತೋರಿದ ಹಿನ್ನಲೆಯಲ್ಲಿ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ನಿನ್ನೆ ಪ್ರತಿಭಟನೆ ನಡೆಯಿತು

ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನ ಮಠ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಬೀಜಾಡಿ, ಕೋಶಾಧಿಕಾರಿ ಲೋಕೇಶ್ ಆಚಾರ್ ಮತ್ತು ಪದಾಧಿಕಾರಿಗಳು ಹಾಗೂ ಲೆಕ್ಕಪರಿಶೋಧಕ ಅರುಣ್ ಕೆ.ಪಿ ಉಪಸ್ಥಿತರಿದ್ದರು

ಪ್ರತಿಭಟನಾ ಸ್ಥಳಕ್ಕೆ ಪುರಸಭೆ ಮುಖ್ಯಾಧಿಕಾರಿ ಆನಂದ ಭೇಟಿ ನೀಡಿ ಮನವಿ ಸ್ವೀಕರಿಸಿದರು. ತಾನು ಹೊಸದಾಗಿ ಅಧಿಕಾರ ಸ್ವೀಕರಿಸಿದ್ದು ಮನವಿಯ ಅಂಶ ಪರಿಶೀಲಿಸಿ ವಾರದೊಳಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ