ಐವನ್ ಡಿಸೋಜ ಪ್ರಚೋದನಾಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನಾ ಮೆರವಣಿಗೆ

ಉಡುಪಿ : ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಪ್ರಚೋದನಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ನೇತೃತ್ವದಲ್ಲಿ ಇಂದು ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಬನ್ನಂಜೆ ಶ್ರೀ ನಾರಾಯಣಗುರು ವೃತ್ತದಿಂದ ಆರಂಭಗೊಂಡ ಮೆರವಣಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯವರೆಗೆ ಸಾಗಿಬಂತು. ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಹತ್ತಾರು ಬಿಜೆಪಿ ಕಾರ್ಯಕರ್ತರು ಮೆರವಣಿಗೆಯುದ್ಧಕ್ಕೂ ಐವನ್ ಡಿಸೋಜ ಹಾಗೂ ಕಾಂಗ್ರೆಸ್ ವಿರುದ್ಧ ದಿಕ್ಕಾರ ಕೂಗಿದರು. ಐವನ್ ಡಿಸೋಜ ವಿರುದ್ಧ ತಕ್ಷಣವೇ ಎಫ್ಐಆರ್ ದಾಖಲಿಸಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕೊನೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಅವರಿಗೆ ಮನವಿ‌ ಸಲ್ಲಿಸಲಾಯಿತು.

ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಹೆಗ್ಡೆ ಮಾತನಾಡಿ, ಕರ್ನಾಟಕದಲ್ಲಿ ಬಾಂಗ್ಲಾದೇಶದ ಮಾದರಿಯಲ್ಲಿ ದಂಗೆ ಏಳುತ್ತೇವೆ ಎಂಬ ಐವನ್ ಡಿಸೋಜ ಹೇಳಿಕೆಯನ್ನು ಯುವಮೋರ್ಚಾ ಖಂಡಿಸುತ್ತದೆ. ನೀಚಾ ಹೇಳಿಕೆ ನೀಡಿರುವ ಐವನ್ ಡಿಸೋಜ ವಿರುದ್ಧ ಸುಮೋಟ ಕೇಸ್ ದಾಖಲಿಸಿ, ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಭಷ್ಟಾಚಾರ, ಅತ್ಯಾಚಾರ, ಅಪರಾಧ ಚಟುವಟಿಕೆ ಹೆಚ್ಚುತ್ತಿದೆ. ಹಿಂದೂ ಯುವತಿಯರಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್