ಮಲ್ಪೆ ಕಡಲ ತೀರಕ್ಕೆ ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ : ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ

ಉಡುಪಿ : ಮಲ್ಪೆ ಕಡಲ ತೀರಕ್ಕೆ ಪ್ರವಾಸಿಗರು ಆಗಮಿಸುತ್ತಿರುವುದು ದಿನೇ ದಿನೇ ಹೆಚ್ಚುತ್ತಿದೆ. ಪ್ರವಾಸಿಗರ ಅನುಕೂಲಕ್ಕೆ ಅಗತ್ಯವಿರುವ ಮೂಲ ಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳ್ಳಲು, ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಲ್ಪೆ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಮಲ್ಪೆ, ಪಡುಕೆರೆ ಬೀಚ್ ಪ್ರದೇಶದ ಸ್ವಚ್ಚತಾ ನಿರ್ವಹಣೆ, ಫುಡ್‌ಕೋರ್ಟ್, ಶೌಚಾಲಯ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಒಳಗೊಂಡಂತೆ ಬೀಚ್ ಪ್ರದೇಶದ ಮಾಸ್ಟರ್ ಪ್ಲಾನ್ ವರದಿಯನ್ನು ಪ್ರವಾಸಿಗರಿಗೆ ಅನುಕೂಲವಾಗುವ ರೀತಿಯಲ್ಲಿ ಬಂದರು ಮತ್ತು ಮೀನುಗಾರಿಕೆ ಚಟುವಟಿಕೆ ಪ್ರದೇಶಗಳ ಸ್ಥಳ ಮೀಸಲಿರಿಸಿ, ಸಮಗ್ರವಾದ ವರದಿಯನ್ನು ಶೀಘ್ರವಾಗಿ ತಯಾರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮಲ್ಪೆ ಕಡಲ ತೀರದಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಸುರಕ್ಷತೆಗೆ ಪ್ರಥಮ ಆದ್ಯತೆಯನ್ನು ನೀಡುವುದರೊಂದಿಗೆ ಕಾಮಗಾರಿಗಳನ್ನು ಕೈಗೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ವಾರದ ಕಡೆಯ ದಿನಗಳಲ್ಲಿ ನಿರೀಕ್ಷೆಗೂ ಮೀರಿ ಹೆಚ್ಚು ಪ್ರವಾಸಿಗರು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಆಗಮಿಸುತ್ತಿದ್ದಾರೆ. ಅವರುಗಳಿಗೆ ಸ್ಥಳೀಯ ಕಡಲ ತೀರದ ಮಾಹಿತಿ ಇರುವುದಿಲ್ಲ. ಅವರುಗಳಿಗೆ ಮಾಹಿತಿ ತಿಳಿಸಲು ಒತ್ತು ನೀಡಬೇಕು. ಇದರಿಂದ ಯಾವುದೇ ಅವಘಡಗಳು ಆಗದಂತೆ ತಪ್ಪಿಸಲು ಸಾಧ್ಯ ಎಂದರು.

ಬೀಚ್ ಪ್ರದೇಶಗಳಲ್ಲಿ ಪ್ರವಾಸಿಗರ ಸುರಕ್ಷತೆ ಹಾಗೂ ಭದ್ರತೆಗಾಗಿ ಅಗತ್ಯವಿರುವ ಜೀವ ರಕ್ಷಕ ಸಿಬ್ಬಂದಿಗಳನ್ನು ಆಯ್ಕೆ ಮಾಡಿ, ಅವರುಗಳಿಗೆ ಅಗತ್ಯವಿರುವ ತರಬೇತಿ ನೀಡಿ ಅವರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಬೇಕು ಎಂದ ಅವರು, ಸೈಂಟ್ ಮೇರೀಸ್ ದ್ವೀಪಕ್ಕೆ ಅಗತ್ಯವಿರುವ ಜೀವ ರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !