ಪ್ರಚೋಚನಕಾರಿ ಭಾಷಣ – ಪ್ರಮೋದ್ ಮಧ್ವರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಉಡುಪಿ : ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮಾರ್ಚ್ 22ರಂದು ಮಲ್ಪೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದಲ್ಲಿ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್ ವಿರುದ್ಧ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಸ್ವಯಂ ಪ್ರೇರಿತ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಏಕ ಸದಸ್ಯ ಪೀಠ, ಮುಂದಿನ ವಿಚಾರಣೆಯ ದಿನಾಂಕದವರೆಗೆ ಪ್ರಮೋದ್ ಮಧ್ವರಾಜ್ ವಿರುದ್ಧ ತನಿಖೆಯನ್ನು ತಡೆಹಿಡಿದು ಆದೇಶ ನೀಡಿದೆ. ಪ್ರಮೋದ್ ಮಧ್ವರಾಜ್ ಪರವಾಗಿ ನ್ಯಾಯವಾದಿ ದಳವಾಯಿ ವೆಂಕಟೇಶ್ ವಾದಿಸಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ