ಪಿಯುಸಿ ಫಲಿತಾಂಶ : ಉಡುಪಿ ರಾಜ್ಯಕ್ಕೇ ಪ್ರಥಮ – ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿವರು….

ಉಡುಪಿ : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ರಾಜ್ಯದಲ್ಲೇ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ.

ಆಸ್ತಿ ಎಸ್ ಶೆಟ್ಟಿ ರಾಜ್ಯಕ್ಕೇ ನಾಲ್ಕನೇ ರ್‍ಯಾಂಕ್ ಗಳಿಸಿದ್ದು, ಇವರು ಉಡುಪಿ ಜಿಲ್ಲೆಯ ಕಾರ್ಕಳದ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ. ಆಸ್ತಿ ಎಸ್ ಶೆಟ್ಟಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿದ್ದಾರೆ. ಭೂಮಿಕಾ ಆರ್ ಹೆಗ್ಡೆ ರಾಜ್ಯಕ್ಕೆ ಐದನೇ ರ್‍ಯಾಂಕ್ ಗಳಿಸಿದ್ದು, ಇವರು ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ.

ಭೂಮಿಕಾ ಆರ್ ಹೆಗ್ಡೆ ಗೆ ಪಿಯುಸಿಯಲ್ಲಿ 595 ಅಂಕಬಂದಿದೆ. ಕಾಮರ್ಸ್ ವಿಭಾಗದಲ್ಲಿ ಸಹನಾ ನಾಯಕ್ 594 ಅಂಕ ಗಳಿಸಿ
ರಾಜ್ಯಕ್ಕೆ 6ನೇ ರ್‍ಯಾಂಕ್ ಪಡೆದಿದ್ದಾರೆ. ಇವರು ಕಾರ್ಕಳದ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ.

ಇನ್ನು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಪೂರ್ವ್ ವಿ. ಕುಮಾರ್ ವಿಜ್ಞಾನ ವಿಭಾಗದಲ್ಲಿ 595 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾನೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ