ಲಿಮ್ಕಾ ಬುಕ್‌ ಆಫ್ ರೆಕಾರ್ಡ್‌ ಪಡೆದಿದ್ದ ಬಾಲಕಿ ಪೂರ್ವಿ ನಿಧನ

ಪಣಂಬೂರು : ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್‌ ಎಸ್‌. ಕುಂದರ್‌, ವೈಶಾಲಿ ಎಲ್‌. ಬೆಂಗ್ರೆ ಅವರ ಪುತ್ರಿ, ಲಿಮ್ಕಾ ಬುಕ್‌ ದಾಖಲೆಯ ಪೂರ್ವಿ (7) ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನ ಹೊಂದಿದಳು.

2019ರಲ್ಲಿ 1 ನಿಮಿಷದಲ್ಲಿ ದಾಖಲೆಯ ರೈಮ್ಸ್‌ ಆಟವಾಡಿ ಇಂಡಿಯನ್‌ ಬುಕ್‌ ಆಫ್‌ ರೆಕಾಡ್ಸ್‌ನಲ್ಲಿ ಹೆಸರು ಮಾಡಿದ್ದಳು. ಸಣ್ಣ ಪ್ರಾಯದಲ್ಲೇ ಚುರುಕಿನಿಂದ ಕೂಡಿದ್ದ ಪೂರ್ವಿ ಫುಟ್‌ಬಾಲ್‌, ಭರತನಾಟ್ಯದಲ್ಲಿ ತನ್ನ ಸಾಮರ್ಥ್ಯ ಪ್ರದರ್ಶಿಸಿ ಜನರ ಪ್ರೀತಿಗೆ ಪಾತ್ರವಾಗಿದ್ದಳು. ವಿವಿಧ ಸಂಘ ಸಂಸ್ಥೆಯಿಂದ ಸಮ್ಮಾನ ಪಡೆದುಕೊಂಡಿದ್ದಳು.

ಗ್ರೀನ್‌‌ವುಡ್‌ ಇಂಟರ್‌ನ್ಯಾಷನಲ್‌ ಶಾಲೆಯಲ್ಲಿ ಕಲಿಯುತ್ತಿದ್ದ ಪೂರ್ವಿ ಅನಾರೋಗ್ಯಕ್ಕೀಡಾದಾಗ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಅವಳ ನಿಧನಕ್ಕೆ ಬೆಂಗ್ರೆ ವಿದ್ಯಾರ್ಥಿ ಸಂಘ, ಸ್ಥಳೀಯ ಸಂಘ-ಸಂಸ್ಥೆಗಳು ಶೋಕ ವ್ಯಕ್ತಪಡಿಸಿವೆ.

Related posts

ಎ.18ರಂದು “ಕೋರ” ಚಿತ್ರ ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲಿ ಬಿಡುಗಡೆ

ಜೈಲಿನ ಜಾಮರ್‌ನಿಂದ ಸಾರ್ವಜನಿಕರಿಗೆ ತೊಂದರೆ ತಪ್ಪಿಸಲು ಜೈಲಾಧಿಕಾರಿಗಳಿಗೆ ಶಾಸಕ ಕಾಮತ್ ಆಗ್ರಹ

ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ 20 ಲಕ್ಷ ರೂಪಾಯಿ ಕಾಮಗಾರಿಯ ಗುದ್ದಲಿ ಪೂಜೆ