ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ಲಬ್ ಬುಲ್ ಬುಲ್ ಉತ್ಸವಕ್ಕೆ ಪುತ್ತಿಗೆ ಶ್ರೀ ಚಾಲನೆ

ಉಡುಪಿ : ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ ಸಂಗಡಿಗರೊಂದಿಗೆ ಬಾಲ ಲೀಲೆಗಳ ಮುಖಾಂತರ ಎಲ್ಲರ ಮನಸೆಳೆದವನು. ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಶ್ರೀಕೃಷ್ಣನ ಫ್ರೆಂಡ್ಸ್ ಇದ್ದಂತೆ.​ ಇಂದು ಶ್ರೀ ಕೃಷ್ಣನ ಅಂಗಳದಲ್ಲಿ ಸ್ಕೌಟ್ ಮತ್ತು ಬುಲ್ ಬುಲ್ ಮಕ್ಕಳು ತಮ್ಮ ಪ್ರತಿಭಾ ಪ್ರದರ್ಶನ ಮಾಡಿ ಅವನ ಕೃಪೆಗೆ ಪಾತ್ರರಾಗಿದ್ದಾರೆ. ಅವರನ್ನು ಕೃಷ್ಣ ಸದಾ ಅನುಗ್ರಹಿಸಲಿ​ ಎಂದು ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಜಿಲ್ಲಾ ಮಟ್ಟದ ಕ್ಲಬ್ ಬುಲ್ ಬುಲ್ ಉತ್ಸವವನ್ನು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ ಜಿಲ್ಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ವಿವಿಧ ಕಾರ್ಯಕ್ರಮ​ಗಳನ್ನು ಹಮ್ಮಿಕೊ​ಳ್ಳಲಾಗುತ್ತಿದೆ. ಈ ಸ್ಕೌಟಿಂಗ್ ಚಳುವಳಿಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸುವಂತೆ ಕರೆ ನೀಡಿದರು.​ ಒಂದು ದಿನದ ಕಪ್ ಬುಲ್ ಬುಲ್ ಉತ್ಸವದಲ್ಲಿ ಮಕ್ಕಳಿಗೆ ವಿವಿಧ ತರಬೇತಿಗಳು, ಮಾಹಿತಿಗಳು, ಆಟೋಟಗಳು ಮುಂತಾದ ಕಾರ್ಯಕ್ರಮಗಳು ಹಮ್ಮಿ​ ಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ​ಜಿಲ್ಲಾ ಸ್ಕೌಟ್ ಆಯುಕ್ತರಾದ ಜನಾರ್ದನ್ ಕೊಡವೂರು, ಮಠದ ರಮೇಶ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ