117
ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳ-ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ ಸಂಗ್ರಹ ಕೇಂದ್ರದ ಆದೇಶವನ್ನು ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಹಿಂಪಡೆದಿದ್ದು ಸದ್ಯಕ್ಕೆ ಈ ಟೋಲ್ ಕೇಂದ್ರ ಸ್ಥಗಿತಗೊಳಿಸಲು ತೀರ್ಮಾನಿಸಿದೆ.
ಟೋಲ್ ಕೇಂದ್ರಕ್ಕೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾದ ಕಾರಣ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಂದ ಈ ಅಧಿಕೃತ ಆದೇಶ ಹೊರ ಬಿದ್ದಿದೆ.