ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಉಡುಪಿ : ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಇಂದು ಉಡುಪಿ ಜಿಲ್ಲಾ ಪಂಚಾಯತ್ ಡಾ|| ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಕೊರಗ ಸಮುದಾಯದ ಸಮಗ್ರ ಸಮಸ್ಯೆಗಳ ಪರಿಹಾರದ ಬಗ್ಗೆ, ಕಿಂಡಿ ಅಣೆಕಟ್ಟು ನಿರ್ವಹಣೆ ಬಗ್ಗೆ, ಬಿಪಿಎಲ್ ಕಾರ್ಡ್/ ಪಡಿತರ ಚೀಟಿ ತಾಂತ್ರಿಕ ಸಮಸ್ಯೆ ಜೊತೆಗೆ ಅನರ್ಹ ಪಡಿತರ ಚೀಟಿಗಳನ್ನು ಪುನರ್ ಪರಿಶೀಲಿಸುವ ಬಗ್ಗೆ ಚರ್ಚೆ ನಡೆಯಿತು. 94 ಸಿ 94 ಸಿ.ಸಿ ಅಡಿಯಲ್ಲಿ ಸಲ್ಲಿಸಿರುವ ಅರ್ಜಿಯ ಶೀಘ್ರ ವಿಲೇವಾರಿ ಬಗ್ಗೆ, ಡೀಮ್ಡ್ ಹಾಗೂ ಭಾಗಶಃ ಡೀಮ್ಡ್ ಪ್ರದೇಶದಲ್ಲಿ ವಾಸ್ತವ್ಯವಿರುವ ಫಲಾನುಭವಿಗಳಿಗೆ ತಕ್ಷಣವೇ ಹಕ್ಕು ಪತ್ರ ನೀಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಜಿಲ್ಲೆಯಲ್ಲಿ 9&11 ಅನುಮೋದನೆಗೆ ಪ್ರಾಧಿಕಾರದಿಂದ ವಿಳಂಬವಾಗುತ್ತಿದ್ದು ಕಾಲಮಿತಿಯಲ್ಲಿ ಕಡತಗಳನ್ನು ವಿಲೇವಾರಿ ಮಾಡಲು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನೀಲ್ ಕುಮಾರ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ. ಅರುಣ್ ಕೆ, ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !