ಬ್ರಹ್ಮಾವರ : ಉಡುಪಿ ವಿಧಾನಸಭೆ ಕ್ಷೇತ್ರದ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಶೆಟ್ಟಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕ ಮಾಡಿ ಆದೇಶಿಸಿದ್ದಾರೆ.
ತಕ್ಷಣ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ.