ಪಡಿತರ ಅಕ್ಕಿ ಅಕ್ರಮ ದಾಸ್ತಾನು ಕೇಂದ್ರಕ್ಕೆ ದಾಳಿ – 31 ಚೀಲ ಅಕ್ಕಿ ವಶ

ಕೋಟ : ಬ್ರಹ್ಮಾವರ ಆಹಾರ ನಿರೀಕ್ಷಕ ವಸಂತ‌ಕುಮಾರ್‌ ನೇತೃತ್ವದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹ ಕೇಂದ್ರಕ್ಕೆ ದಾಳಿ ನಡೆಸಿ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.

ಸಾರ್ವಜನಿಕ ದೂರಿನ ಮೇರೆಗೆ ಕೋಟ ಹೋಬಳಿಯ ಸಾಯಿರಾಮ್‌ ಜನರಲ್‌ ಸ್ಟೋರ್‌‌ನಲ್ಲಿ ಅನ್ನ ಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಕಾನೂನು ಬಾಹಿರವಾಗಿ ಸಂಗ್ರಹಿಸಿಡಲಾಗಿತ್ತು. ಸ್ಥಳಕ್ಕೆ ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ತೆರಳಿದ ಆಹಾರ ನಿರೀಕ್ಷಕರು, ಅಕ್ರಮವಾಗಿ ದಾಸ್ತಾನು ಇರಿಸಿದ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಒಟ್ಟು 31 ಚೀಲದಲ್ಲಿ ಸಂಗ್ರಹಿಸಿ ಇಡಲಾದ 1,503.55 ಕೆ.ಜಿ ಅಕ್ಕಿಯನ್ನು ಸ್ವಾಧೀನಪಡಿಸಿ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಮಲ್ಪೆ ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಪೊಲೀಸ್ ವಶಕ್ಕೆ

ಕಡಿದು ಬಿಸಾಡಿದ ಬಾಳೆ ದಿಂಡಿನಲ್ಲಿ ಚಿಗುರುಡೆದ ಬಾಳೆಗೊನೆ