ಸೆ.12ಕ್ಕೆ “ರಾನಿ” ಕನ್ನಡ ಸಿನಿಮಾ ಬಿಡುಗಡೆ

ಮಂಗಳೂರು : “ಸೆ.12ಕ್ಕೆ ಬಹು ನಿರೀಕ್ಷಿತ ರಾನಿ ಕನ್ನಡ ಸಿನಿಮಾ ಬಿಡುಗಡೆಗೊಳ್ಳಲಿದೆ. ಆಕ್ಷನ್ ಜೊತೆಗೆ ಫ್ಯಾಮಿಲಿ ಒರಿಯೆಂಟೆಡ್ ಕಥಾನಕ ಇದರಲ್ಲಿದ್ದು ಪ್ರೇಕ್ಷಕರು ಸಿನಿಮಾ ಇಷ್ಟಪಡಲು ಬೇಕಾದ ಎಲ್ಲಾ ಅಂಶಗಳು ಸಿನಿಮಾದಲ್ಲಿ ಇರಲಿದೆ” ಎಂದು ಚಿತ್ರ ನಿರ್ದೇಶಕ ಗುರುತೇಜ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

“ಸಿನಿಮಾದಲ್ಲಿ ಕನ್ನಡದ ಖ್ಯಾತ ನಟರಾದ ರವಿಶಂಕರ್, ಬಿ.ಸುರೇಶ್, ಯಶ್ ಶೆಟ್ಟಿ, ಉಗ್ರಂ ಮಂಜು ಮತ್ತಿತರರು ತಾರಾಗಣದಲ್ಲಿದ್ದಾರೆ. ಚಿತ್ರದಲ್ಲಿ ರಾಧ್ಯ ಮೈಸೂರು, ಸಮೀಕ್ಷಾ ಮೈಸೂರು, ಅಪೂರ್ವ ಮೂವರು ನಾಯಕಿಯರಿದ್ದಾರೆ. ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆದಿದ್ದು ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಕುನಾಲ್ ಗಾಂಜಾವಾಲ, ಹನ್ಸಿಕಾ ಅಯ್ಯರ್, ವಿಸ್ಮಯ ವಿನಾಯಕ್ ಸಹಿತ ಖ್ಯಾತ ಗಾಯಕರು ಹಾಡಿದ್ದಾರೆ.

ಕಿರಣ್ ರಾಜ್ ಕನ್ನಡತಿ ಧಾರವಾಹಿ ಖ್ಯಾತಿಯ ನಟರಾಗಿದ್ದು ಈಗಾಗಲೇ ರಾಜ್ಯದ ಮನೆಮಾತಾಗಿದ್ದಾರೆ“ ಎಂದರು.

ಪತ್ರಿಕಾಗೋಷ್ಟಿಯಲ್ಲಿ ನಾಯಕ ಕಿರಣ್ ರಾಜ್, ಚಂದ್ರಕಾಂತ್ ಪೂಜಾರಿ, ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ, ನಿರ್ಮಾಪಕ ಉಮೇಶ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ