ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿ ಖುಲಾಸೆ

ಮಂಗಳೂರು : ಅಪ್ರಾಪ್ತ ವಯಸ್ಕ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪಿತ್ತಿದೆ.

ಬೆಳ್ತಂಗಡಿಯ ಮಡಂತ್ಯಾರಿನಲ್ಲಿ 23-06-2023‌ರಂದು ಆರೋಪಿ ಶಾಶ್ವತ್‌ ಬಾಲಕಿಯನ್ನು ಹುಟ್ಟುಹಬ್ಬದ ನೆಪದಲ್ಲಿ ತನ್ನ ಸಹೋದರನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಳ್ತಂಗಡಿ ಪೊಲೀಸ್‌ ಠಾಣೆಯ ವೃತ್ತ ನಿರೀಕ್ಷಕ ನಾಗೇಶ್‌ ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯ ಒಟ್ಟು 12 ಸಾಕ್ಷಿಗಳನ್ನು ವಿಚಾರಣೆ ಮಾಡಿತ್ತು. ಈ ಪ್ರಕರಣದಲ್ಲಿ 24 ದಾಖಲೆಗಳನ್ನು ಹಾಜರುಪಡಿಸಲಾಗಿತ್ತು.

ನ್ಯಾಯಾಧೀಶ ಮನು ಕೆ.ಎಸ್‌. ಅವರು ವಿಚಾರಣೆ ನಡೆಸಿ ಈ ತೀರ್ಪು ನೀಡಿದ್ದಾರೆ. ಆರೋಪಿ ಪರ ಆದಾಯ ತೆರಿಗೆಯ ವಿಶೇಷ ಅಭಿಯೋಜಕರೂ ಆಗಿರುವ ಹಿರಿಯ ನ್ಯಾಯವಾದಿ ಹರ್ಷಕುಮಾರ್‌ ಅವರು ವಾದ ಮಂಡಿಸಿದ್ದರು.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ