Wednesday, January 8, 2025
Banner
Banner
Banner
Home » ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅಪರೂಪದ ಜನನ – ನಾಲ್ವರು ಮಕ್ಕಳಿಗೆ ಜನನ ನೀಡಿದ ಮಹಾತಾಯಿ

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅಪರೂಪದ ಜನನ – ನಾಲ್ವರು ಮಕ್ಕಳಿಗೆ ಜನನ ನೀಡಿದ ಮಹಾತಾಯಿ

by NewsDesk

ಮಂಗಳೂರು : ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳಿಗೆ ಜನನ ನೀಡಿದ್ದಾರೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಮಕ್ಕಳಿಗೆ ಜನನ ನೀಡಿದ ಮಹಾತಾಯಿ. ಈ ನಾಲ್ವರ ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿಗೆ ಅವರು ಜನನ ನೀಡಿದ್ದಾರೆ. ಈ ನಾಲ್ಕು ಮಕ್ಕಳೂ ಆರೋಗ್ಯವಾಗಿದ್ದಾರೆ‌‌. ಈ ಮಕ್ಕಳು ಕ್ರಮವಾಗಿ 1.1 ಕೆಜಿ, 1.2 ಕೆಜಿ, 800 ಗ್ರಾಂ, 900 ಗ್ರಾಂ ತೂಕ ಹೊಂದಿದೆ. ಆದರೆ 30ವಾರಗಳ ಹೆರಿಗೆಯಾಗಿದ್ದು, ಪ್ರಸವ ಪೂರ್ವ ಜನನವಾದ್ದರಿಂದ ಸದ್ಯ ಮಕ್ಕಳಿಗೆ ಎನ್ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಲ್ಕು ಮಕ್ಕಳ ಜನನ ಬಹಳ ಅಪರೂಪವಾಗಿದ್ದು, ಇದು 7,00,000 ಗರ್ಭಧಾರಣೆಗಳಲ್ಲಿ ಒಂದರಲ್ಲಿ ಮಾತ್ರ ಸಂಭವಿಸುತ್ತವೆ. ಸ್ತ್ರೀರೋಗತಜ್ಞೆ, ಡಾ.ಜೋಯ್ಲೀನ್ ಡಿಅಲ್ಮೇಡಾ ಗರ್ಭಿಣಿಯ ಪ್ರಸವಪೂರ್ವ ಆರೈಕೆ ಮಾಡಿದರು. ಹೆರಿಗೆ ಸಂದರ್ಭ ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಿಭಾಗದ ವೈದ್ಯಕೀಯ ತಂಡ ಮುತುವರ್ಜಿಯಿಂದ ಕಾರ್ಯನಿರ್ವಹಿಸಿ ತಾಯಿ-ಮಕ್ಕಳಿಗೆ ಆರೈಕೆ ಮಾಡಿದೆ. ದ.ಕ.ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಅಪರೂಪದ ಹೆರಿಗೆ ಪ್ರಕರಣವಾಗಿದೆ.

You may also like

Leave a Comment

Maax-Media-Logo

Maax News covers major news and events of Udupi district. This channel provides detailed reports on the political, social, economic, and cultural life of Udupi district.

Maax News, equipped with the most sophisticated studio in Udupi, assures people comprehensive news coverage.

Copyrights © maaxmedia.in All Rights Reserved. Designed by Sabweb