ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ನೇಮಕ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಆಯುಕ್ತ ಸಿ.ಎಲ್. ಆನಂದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರಕಾರ ವರ್ಗಾವಣೆ ಮಾಡಿದೆ.

ಮಂಡ್ಯ ಮೂಲದ ಆನಂದ್ ಸಿ ಎಲ್ ಅವರು ಭಾರತೀಯ ಸೇನೆಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಕಾರ್ಕಳ ಎಪಿಎಂಸಿಯಲ್ಲಿ ಒಂಬತ್ತು ತಿಂಗಳ ಕಾಲ ಎಫ್‌ಡಿಎ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

K.A.S ಹಿರಿಯ ಶ್ರೇಣಿಯ ಶಿವಮೊಗ್ಗ ಜಿಲ್ಲೆಯ ತುಂಗಭದ್ರಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನ ಅಧಿಕಾರಿ ರವಿಚಂದ್ರ ನಾಯಕ್‌ರವರನ್ನು ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ನೇಮಕಮಾಡಿ ಆದೇಶ ಹೊರಡಿಸಲಾಗಿದೆ.

ಈ ಹಿಂದೆ ಮಂಗಳೂರಿನ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಆಗಿ ಕಾರ್ಯನಿವಹಿಸುತ್ತಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ