“ರೆಡ್ ಅಲರ್ಟ್” ನಾಳೆ (ಆ.2) ದ.ಕ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ

ಮಂಗಳೂರು : ರೆಡ್ ಅಲರ್ಟ್ ಎಚ್ಚರಿಕೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾನಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ಆಗಸ್ಟ್ 2ರಂದು ರಜೆಯನ್ನು ಘೋಷಿಸಿ‌ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಆಗಸ್ಟ್ 2ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

Related posts

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್

ತಲವಾರು ಝಳಪಿಸಿದ ಪ್ರಕರಣ; ಇಬ್ಬರ ಸೆರೆ

ಪಾರ್ಕ್‌ ಮಾಡಿದ್ದ ದ್ವಿಚಕ್ರವಾಹನ ಕಳವು