“ಮಂಗಳೂರು ಸಮಾಚಾರ” ತೃತೀಯ ಸಂಚಿಕೆ ಬಿಡುಗಡೆ

ಮಂಗಳೂರು : ಪ್ರೆಸ್‌ಕ್ಲಬ್ ಮಂಗಳೂರು ಹೊರತರುತ್ತಿರುವ “ಮಂಗಳೂರು ಸಮಾಚಾರ” ಪತ್ರಿಕೆಯ ತೃತೀಯ ಸಂಚಿಕೆಯ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಜರುಗಿತು.

ಹಿರಿಯ ಪತ್ರಕರ್ತರು ಪ್ರೆಸ್‌ಕ್ಲಬ್ ಮಾಜಿ ಅಧ್ಯಕ್ಷ ಆನಂದ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತಾಡಿದರು. “ಮೂರು ತಿಂಗಳಿಗೊಮ್ಮೆ ಪತ್ರಿಕೆಯನ್ನು ಹೊರತರುತ್ತಿರುವುದು ಒಳ್ಳೆಯ ವಿಚಾರ. ಸರಕಾರದಿಂದ ಪತ್ರಕರ್ತರಿಗೆ ಸಿಗುವ ಸೌಲಭ್ಯ ಮತ್ತು ಅವಕಾಶಗಳ ಬಗ್ಗೆಯೂ ಪತ್ರಿಕೆಯಲ್ಲಿ ವರದಿ ಪ್ರಕಟಿಸಬೇಕು. ಇದರಿಂದ ಪತ್ರಕರ್ತರಿಗೆ ಬಹಳಷ್ಟು ಅನುಕೂಲವಾಗಲಿದೆ. ಸಂಕಷ್ಟದಲ್ಲಿರುವ ಪತ್ರಕರ್ತರನ್ನು ಗುರುತಿಸಿ ನೆರವಿನ ಹಸ್ತ ಚಾಚುವುದಕ್ಕೂ ಪತ್ರಿಕೆ ಬೆಂಬಲ ನೀಡಬೇಕು“ ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ತರ್ಜನಿ ಕಮ್ಯುನಿಕೇಷನ್‌ನ ಸಂಜಯ್ ಪ್ರಭು ಮಾತನಾಡಿ, ”ಪ್ರೆಸ್ ಕ್ಲಬ್ ಹೊರತರುವ ಪತ್ರಿಕೆ ತಿಂಗಳಿಗೊಮ್ಮೆ ಬಿಡುಗಡೆಯಾಗಲಿ. ಪತ್ರಿಕೆಯ ಬೆಳವಣಿಗೆಗೆ ಜಾಹಿರಾತು ಕೂಡಾ ಪಡೆದುಕೊಳ್ಳಿ“ ಎಂದರು.
ವೇದಿಕೆಯಲ್ಲಿ ಪ್ರೆಸ್‌ಕ್ಲಬ್ ಮಾಜಿ ಅಧ್ಯಕ್ಷ ಅನ್ನು ಮಂಗಳೂರು, ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ, ಇಬ್ರಾಹಿಂ ಅಡ್ಕಸ್ಥಳ ಮತ್ತಿತರರು ಉಪಸ್ಥಿತರಿದ್ದರು.

ಆರ್.ಸಿ. ಭಟ್ ಅತಿಥಿಗಳನ್ನು ಸ್ವಾಗತಿಸಿದರು. ವಿಜಯ್ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ನಾಪತ್ತೆಯಾಗಿರುವ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸಲು ಗಂಟಿಹೊಳೆ ಆಗ್ರಹ