ಚಿರಂತನ ಚೇತನ ವಿಶುಕುಮಾರ್ ಕುರಿತ ಕೃತಿ ಬಿಡುಗಡೆ

ಮಂಗಳೂರು : ಉರ್ವಸ್ಟೋರ್ ತುಳುಭವನದ ಅಮೃತ ಸೋಮೇಶ್ವರ ಸಭಾ ಭವನದಲ್ಲಿ ಇತ್ತೀಚೆಗೆ ಏರ್ಪಡಿಸಲಾದ 2024ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಸಮಾರಂಭದಲ್ಲಿ ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಮುದ್ದು ಮೂಡುಬೆಳ್ಳೆ ಬರೆದ “ಚಿರಂತನ ಚೇತನ ವಿಶುಕುಮಾರ್” – ವಿಶುಕುಮಾರರ ವಿಭಿನ್ನ ಪ್ರತಿಭಾ ರಂಗಗಳ ಸಂಕ್ಷಿಪ್ತ ಪರಿಚಯ ನೀಡುವ ಕೃತಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆಯವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಶ್ರೀ ಎಂ ವೀರಪ್ಪ ಮೊಯಿಲಿ, ಮಂಗಳೂರು ವಿ ವಿ ಕುಲಪತಿ ಪ್ರೊ ಪಿ ಎಲ್ ಧರ್ಮ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ, ಪ್ರಶಸ್ತಿ ಪುರಸ್ಕೃತ ಸಂಶೋಧಕ ಬಾಬು ಶಿವ ಪೂಜಾರಿ, ಗುರು ಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್., ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ. ಪೂಜಾರಿ, ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ. ಕೆ, ವಿಶುಕುಮಾರ್ ದತ್ತಿ ನಿಧಿ ಸಂಚಾಲಕ ಸುರೇಶ್ ಪೂಜಾರಿ, ಕುಳಾಯಿ ಪಣಂಬೂರು-ಕುಳಾಯಿ ಘಟಕದ ಅಧ್ಯಕ್ಷೆ ಮನಿಷಾ ರೂಪೇಶ್, ಕಾರ್ಯದರ್ಶಿ ಸಚ್ಚೆಂದ್ರ ಅಂಬಾಗಿಲು, ಸಚಿನ್ ಜಿ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಇಂದು ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಮದುವೆ