ಟ್ರಾಫಿಕ್ ಪೊಲೀಸರಿಂದ ಸತತ ಕಾರ್ಯಾಚರಣೆ; ಬಸ್‌ಗಳ ಕರ್ಕಶ ಹಾರ್ನ್ ತೆರವು, 7000 ರೂ.ದಂಡ ವಸೂಲಿ

ಉಡುಪಿ : ನಗರ ವ್ಯಾಪ್ತಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಟ್ರಾಫಿಕ್ ಪಿ‌ಎಸ್‌ಐ ಸುದರ್ಶನ್ ದೊಡ್ಡಮನಿ ನೇತೃತ್ವದಲ್ಲಿ ಖಾಸಗಿ ಬಸ್‌ಗಳ ಕರ್ಕಶ ಹಾರ್ನ್ ತೆರವುಗೊಳಿಸುವ ಕಾರ್ಯಾಚರಣೆ ನಡೆಯಿತು.

ಜೂನ್ 3ರಂದು ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಉಡುಪಿ ಸಿಟಿ ಬಸ್ ಮಾಲಕರು ಮತ್ತು ಸರ್ವಿಸ್ ಬಸ್ ಮಾಲಕರ ಸಭೆಯಲ್ಲಿ ಉಡುಪಿಯ ಸಿಟಿ ಹಾಗೂ ಸರ್ವಿಸ್ ಬಸ್‌ಗಳಲ್ಲಿ ಅಳವಡಿಸಲಾದ ಕರ್ಕಶ ಹಾರ್ನ್‌ಗಳನ್ನು ಜೂನ್ 15ರೊಳಗೆ ಕಡ್ಡಾಯವಾಗಿ ತೆರವುಗೊಳಿಸುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ಸಂಚಾರ ಪೊಲೀಸರು ನೀಡಿರುವ ಗಡುವು ಮುಗಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಉಡುಪಿ ಸಿಟಿ ಬಸ್‌ಗಳ ಕರ್ಕಶ ಹಾರ್ನ್‌ಗಳನ್ನು ತೆರವುಗೊಳಿಸಿ ದಂಡ ವಿಧಿಸಲಾಗಿತ್ತು. ಅದಾದ ಬಳಿಕ ಸರ್ವಿಸ್ ಬಸ್ ನಿಲ್ದಾಣದಲ್ಲೂ ಕಾರ್ಯಾಚರಣೆ ನಡೆಸಲಾಯಿತು.

ಈ ವೇಳೆ ಸುಮಾರು 14 ಬಸ್‌ಗಳಲ್ಲಿದ್ದ ಕರ್ಕಶ ಹಾರ್ನ್‌ಗಳನ್ನು ತೆರವುಗೊಳಿಸಲಾಯಿತು. ಬಸ್‌ಗಳ ವಿರುದ್ಧ ತಲಾ 500 ರೂ.ನಂತೆ ಒಟ್ಟು 7000 ರೂ. ದಂಡ ವಸೂಲಿ ಮಾಡಲಾಯಿತು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ