ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ “ವಿಶ್ವಪ್ರಭಾ ಪುರಸ್ಕಾರ-2025

ಉಡುಪಿ : ಉಡುಪಿಯ ಸಂಸ್ಕೃತಿ ವಿಶ್ವ‌ಪ್ರತಿಷ್ಠಾನದ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣಿೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025’ನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ ನೀಡಿ ಪುರಸ್ಕರಿಸಲಾಗುವುದು.

ಈ ಪುರಸ್ಕಾರವು ಪ್ರಶಸ್ತಿ ಪತ್ರ, ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿರುತ್ತದೆ. ಫೆಬ್ರವರಿಯಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐ‌ವೈ‌ಸಿ ಸಭಾಂಗಣದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ವಿಶ್ವಪ್ರಭಾ ಪುರಸ್ಕಾರ ಸಮಿತಿಯ ಸಂಚಾಲಕ ಮರವಂತೆ ನಾಗರಾಜ ಹೆಬ್ಬಾರ್ ಪತ್ರಿಕಾ‌ಗೋಷ್ಠಿಯಲ್ಲಿ ತಿಳಿಸಿರುತ್ತಾರೆ.

ಇದೇ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಿಶ್ವಪ್ರಭಾ ಪುರಸ್ಕಾರದ ಪ್ರಾಯೋಜಕರು ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ್ ಶೆಣಿೈ, ಉಪಾಧ್ಯಕ್ಷರಾದ ಸಂಧ್ಯಾ ಶೆಣೆೈ, ವಿಘ್ನೇಶ್ವರ ಅಡಿಗ, ಹಾಗೂ ಸಂಚಾಲಕರಾದ ರವಿರಾಜ್ ಎಚ್.ಪಿ ಉಪಸ್ಥಿತರಿದ್ದರು.

Related posts

ನೆಲ, ನೀರು, ಆಕಾಶ – ಮಕ್ಕಳ ವಿಜ್ಞಾನ ಕಾರ್ಯಾಗಾರ

ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ; ನಾಲ್ವರು ಅರೆಸ್ಟ್

ಟ್ರಾನ್ಸ್ಲೇಷನಲ್ ಆಂಡ್ರಾಲಜಿ ಕುರಿತು ಇಂಡೋ-ಜರ್ಮನ್ ಕಾರ್ಯಾಗಾರ