ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರಕ್ಕೆ ಸುರಕ್ಷಿತ ಕ್ರಮಕ್ಕಾಗಿ ಮನವಿ

ಕೋಟ : ಕೋಟೇಶ್ವರ ಶ್ರೀ ಕಾಳಾವರ ವರದರಾಜ್ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರಕ್ಕೆ ಸುರಕ್ಷಿತ ಕ್ರಮಕ್ಕಾಗಿ ಮನವಿ ಸಲ್ಲಿಸಲಾಯಿತು.

ಇತ್ತೀಚಿಗೆ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಬಿ.ಎಸ್ಸಿ ತರಗತಿ ವಿದ್ಯಾರ್ಥಿ ಧನುಷ್‌ ಯು ಅಮೀನ್ ತನ್ನಲ್ಲದ ತಪ್ಪಿಗೆ ಅಮಾಯಕವಾಗಿ ರಸ್ತೆ ಅಪಘಾತಕ್ಕೆ ತುತ್ತಾಗಿ ಮೃತಪಟ್ಟಿದ್ದರು.

ಕೋಟೇಶ್ವರ ಹಾಲಾಡಿ ರಾಜ್ಯ ಹೆದ್ದಾರಿಯಲ್ಲಿ ತುರ್ತಾಗಿ ಸೂಕ್ತ ರಸ್ತೆ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು ಮತ್ತು ಮಿತಿ ಮೀರಿದ ವೇಗದಲ್ಲಿ ವಾಹನ ಚಾಲನೆ ಮಾಡುವ ಚಾಲಕರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ್ ಅವರ ನೇತೃತ್ವದಲ್ಲಿ ಅಧ್ಯಾಪಕರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ನಿಯೋಗ ಉಡುಪಿ ಜಿಲ್ಲಾಧಿಕಾರಿಗಳು, ಕುಂದಾಪುರ ತಹಸಿಲ್ದಾರ್, ಕುಂದಾಪುರ ಪೋಲೀಸ್ ನಿರೀಕ್ಷಕರು, ಕುಂದಾಪುರ ಸಂಚಾರಿ ಪೋಲೀಸ್ ಠಾಣಾಧಿಕಾರಿ ಮತ್ತು ಗ್ರಾಮ ಪಂಚಾಯತ್ ಕೋಟೇಶ್ವರ ಇವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !