ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಕೇಂದ್ರ ಸಚಿವರಲ್ಲಿ ಮನವಿ – ಶ್ರೀ ಬಿ ವೈ ರಾಘವೇಂದ್ರ

ಕೊಲ್ಲೂರು : ಸಂಸದ ಬಿ. ವೈ.ರಾಘವೇಂದ್ರ ಅವರು ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣ ಮಾಡಲು ಮನವಿ ಮಾಡಿದರು.

ಸುಮಾರು 1200 ವರ್ಷಗಳ ಇತಿಹಾಸವಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿರುತ್ತದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ.

ಕ್ಷೇತ್ರದಲ್ಲಿ ಮೂಲಸೌಕರ್ಯದ ಜೊತೆಗೆ ಸೌಪರ್ಣಿಕಾ ನದಿ ಸ್ವಚ್ಛತೆ, ಶಂಕರಾಚಾರ್ಯ ಥೀಮ್ ಪಾರ್ಕ್, ಮಲ್ಟಿಲೆವೆಲ್ ಪಾರ್ಕಿಂಗ್, ವಿಮಾನ, ರೈಲ್ವೆ, ಬಸ್ ಹಾಗೂ ಬಂದರು ಸಂಪರ್ಕ, ಕೇಬಲ್ ಕಾರ್, ಬೈಂದೂರಿನ ಇತಿಹಾಸ ಪ್ರಸಿದ್ಧ ದೇವಸ್ಥಾಗಳ ರಸ್ತೆ ಸಂಪರ್ಕ, ಕಡಲ ತೀರ ಹಾಗೂ ಜಲಪಾತಗಳ ಅಭಿವೃದ್ಧಿ, ಪಂಚಗಂಗಾವಳಿ ನದಿ ಅಭಿವೃದ್ಧಿ ಸಹಿತ ಹಲವು ಯೋಜನೆಗಳನ್ನೊಳಗೊಂಡ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ಮಂಜೂರು ಮಾಡುವಂತೆ ಸಚಿವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಹಾಗೂ ಕೊಲ್ಲೂರು ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿಗಳಾದ ಕೃಷ್ಣ ಪ್ರಸಾದ ಅಡ್ಯಂತಾಯ, ಬೈಂದೂರಿನ ವೆಂಕಟೇಶ್ ಕಿಣಿ ಅವರು ಉಪಸ್ಥಿತರಿದ್ದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು